ನವದೆಹಲಿ: ತೈಲ ಕಂಪನಿಗಳು ಪೆಟ್ರೋಲ್ ಮತ್ತು ಡೀಸೆಲ್ ದರ ಪರಿಷ್ಕರಿಸಿದ್ದು, ಪರಿಷ್ಕೃತ ದರ ಬುಧವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ಪೆಟ್ರೋಲ್ ಬೆಲೆ ಲೀಟರಿಗೆ 13 ಪೈಸೆ ಏರಿಕೆ ಕಂಡಿದ್ದರೆ, ಡೀಸೆಲ್ ಬೆಲೆ ಪ್ರತಿ ಲೀಟರಿಗೆ 12 ಪೈಸೆಯಷ್ಟು ಇಳಿಕೆಯಾಗಿದೆ. ಇಂದು ಮಧ್ಯರಾತ್ರಿಯಿಂದ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಪ್ರತಿ ಲೀಟರ್ ಗೆ 66.10 ರು. ಹಾಗೂ ಡೀಸೆಲ್ ಬೆಲೆ 54.57 ರುಪಾಯಿಯಾಗಲಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದ ಏರಿಕೆ ಹಾಗೂ ರುಪಾಯಿ ಮೌಲ್ಯದಲ್ಲಿನ ವ್ಯತ್ಯಾಸದ ಹಿನ್ನೆಲೆಯಲ್ಲಿ ತೈಲ ತರವನ್ನು ಪರಿಷ್ಕರಿಸಲಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.
ನವೆಂಬರ್ 15ರಂದು ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಳಿಕೆಯಾಗಿತ್ತು. ಪೆಟ್ರೋಲ್ ದರ ಪ್ರತಿ ಲೀಟರ್ ಗೆ 1.46 ರು ಹಾಗೂ ಡೀಸೆಲ್ ಪ್ರತಿ ಲೀಟರ್ ಗೆ 1.53 ರುನಷ್ಟು ಇಳಿಕೆಯಾಗಿತ್ತು.