ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇದೀಗ ಏರಿಕೆಯತ್ತ ಮುಖಮಾಡಿದ್ದು, ಸದ್ಯದಲ್ಲೇ ಗ್ರಾಹಕರಿಗೆ ಮತ್ತಷ್ಟು ಬೆಲೆ ಏರಿಕೆಯ ಬಿಸಿ ತಟ್ಟಲಿದೆ.
ಇತ್ತೀಚಿಗಷ್ಟೇ ಪೆಟ್ರೋಲ್ ದರ ಏರಿಕೆ ಮಾಡಿದ್ದ ತೈಲ ಕಂಪನಿಗಳು ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಏರಿಯಾದ ಹಿನ್ನೆಲೆಯಲ್ಲಿ ಈಗ ಮತ್ತಷ್ಟು ಬೆಲೆ ಏರಿಕೆ ಮಾಡಲು ಮುಂದಾಗಿವೆ.
ಸದ್ಯ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 64.72 ರು.ಹಾಗೂ ಡೀಸೆಲ್ ಬೆಲೆ 52.61ರು. ಇದೆ. ಆದರೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ 53 ಡಾಲರ್ ಗೆ ಏರಿಕೆಯಾಗಿದೆ.
ಕಳೆದ ತಿಂಗಳು ರಷ್ಯಾ ತೈಲ ರಫ್ತು ರಾಷ್ಚ್ರಗಳ ಒಕ್ಕೂಟ ಸೇರಿದ ಪರಿಣಾಮ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದ್ದು, ಅದನ್ನು ಗ್ರಾಹಕರಿಗೆ ವರ್ಗಾಯಿಸಲು ತೈಲ ಕಂಪನಿಗಳು ತುದಿಗಾಲಲ್ಲಿ ನಿಂತಿವೆ.