ಚೀನಾ ಸರಕುಗಳನ್ನು ಬಹಿಷ್ಕರಿಸುವುದರಿಂದ ಭಾರತ- ಚೀನಾ ನಡುವಿನ ಸಂಬಂಧಕ್ಕೆ ಧಕ್ಕೆ

ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವುದರಿಂದ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಡಲಿದೆ ಎಂದು ಹೇಳಿದೆ.
ಚೀನಾ ಸರಕುಗಳನ್ನು ಬಹಿಷ್ಕರಿಸುವುದರಿಂದ ಭಾರತ- ಚೀನಾ ನಡುವಿನ ಸಂಬಂಧಕ್ಕೆ ಧಕ್ಕೆ
ಚೀನಾ ಸರಕುಗಳನ್ನು ಬಹಿಷ್ಕರಿಸುವುದರಿಂದ ಭಾರತ- ಚೀನಾ ನಡುವಿನ ಸಂಬಂಧಕ್ಕೆ ಧಕ್ಕೆ

ಬೀಜಿಂಗ್: ಭಾರತದಲ್ಲಿ ಚೀನಾ ಸರಕು/ ಉತ್ಪನ್ನಗಳನ್ನು ಬಹಿಷ್ಕಸುವ ಕರೆ ಹೆಚ್ಚಾಗುತ್ತಿದ್ದಂತೆಯೇ, ಚೀನಾ ಮಾಧ್ಯಮ ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವುದರಿಂದ ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧ ಹದಗೆಡಲಿದೆ ಎಂದು ಹೇಳಿದೆ.

ಚೀನಾ ಪತ್ರಿಕೆ ಗ್ಲೋಬಲ್ ಟೈಮ್ಸ್ ಭಾರತ ಚೀನಾ ಉತ್ಪನ್ನಗಳನ್ನು ಬಹಿಷ್ಕರಿಸುವುದರ ಬಗ್ಗೆ ಲೇಖನ ಪ್ರಕಟಿಸಿದ್ದು, ಚೀನಾದೊಂದಿಗೆ ವ್ಯಾಪಾರ ಅಸಮತೋಲನವನ್ನು ಸರಿಪಡಿಸಿಲಿಕೊಳ್ಳಲು ಭಾರತ ತನ್ನ ಕೈಗಾರಿಕಾ ನೀತಿಗಳನ್ನು ಸುಧಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದೆ.

ವ್ಯಾಪಾರ ಅಸಮತೋಲನವನ್ನು ನಿವಾರಿಸಲು ಭಾರತ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬದಲು ತನ್ನ ಕೈಗಾರಿಕಾ ಮೂಲಸೌಕರ್ಯವನ್ನು ಸುಧಾರಣೆ ಮಾಡಬೇಕಿದೆ, ಅದನ್ನು ಬಿಟ್ಟು ಚೀನಾದ ಸರಕುಗಳನ್ನು ಬಹಿಷ್ಕರಿಸಿದರೆ ಉಭಯ ದೇಶಗಳ ನಡುವಿನ ಸಂಬಂಧ ಹದಗೆಡಲಿದೆ ಎಂದು ಚೀನಾ ಮಾಧ್ಯಮ ಎಚ್ಚರಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com