ರೂಪಾಯಿಯನ್ನು ಅಪಮೌಲ್ಯಗೊಳಿಸುವ ಉದ್ದೇಶವಿಲ್ಲ: ಹಣಕಾಸು ಸಚಿವಾಲಯ

ರೂಪಾಯಿ ಅಪಮೌಲ್ಯೀಕರಣದ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯ ಇಳಿಕೆಯಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಹಣಕಾಸು ಸಚಿವಾಲಯ, ರೂಪಾಯಿಯನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.
ರೂಪಾಯಿಯನ್ನು ಅಪಮೌಲ್ಯಗೊಳಿಸುವ ಉದ್ದೇಶವಿಲ್ಲ: ಹಣಕಾಸು ಸಚಿವಾಲಯ
ರೂಪಾಯಿಯನ್ನು ಅಪಮೌಲ್ಯಗೊಳಿಸುವ ಉದ್ದೇಶವಿಲ್ಲ: ಹಣಕಾಸು ಸಚಿವಾಲಯ

ನವದೆಹಲಿ: ರೂಪಾಯಿ ಅಪಮೌಲ್ಯೀಕರಣದ ಬಗ್ಗೆ ವರದಿಗಳು ಪ್ರಕಟವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯ ಇಳಿಕೆಯಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಿರುವ ಹಣಕಾಸು ಸಚಿವಾಲಯ, ರೂಪಾಯಿಯನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹೇಳಿದೆ.

ಕಳೆದ ಕೆಲವು ತಿಂಗಳುಗಳಿಂದ ರಪ್ತು ಪ್ರಮಾಣ ಇಳಿಕೆಯಾಗುತ್ತಿದ್ದು, ಇದರಿಂದ ಹೊರಬರಲು ರೂಪಾಯಿ ಅಪಮೌಲ್ಯಗೊಳಿಸುವ ಬಗ್ಗೆ ವಾಣಿಜ್ಯ ಸಚಿವಾಲಯ ಹಣಕಾಸು ಸಚಿವಾಲಯದೊಂದಿಗೆ ಚರ್ಚೆ ನಡೆಸಲಿದೆ ಎಂಬ ಬಗ್ಗೆ ವರದಿಗಳು ಪ್ರಕಟವಾಗಿದ್ದವು. ರಫ್ತು ಪ್ರಮಾಣ ಹೆಚ್ಚಿಸುವುದಕ್ಕೆ ವಾಣಿಜ್ಯ ಸಚಿವಾಲಯ ಕ್ರಮ ಕೈಗೊಳ್ಳಲಿದೆ. ಆದರೆ ರೂಪಾಯಿ ಮೌಲ್ಯವನ್ನು ಅಪಮೌಲ್ಯಗೊಳಿಸುವ ಪ್ರಸ್ತಾವನೆ ಇಲ್ಲ ಎಂದು ಹಣಕಾಸು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ರಫ್ತು ಉದ್ಯಮ ಹೊಂದಿರುವವರು ಈ ಬಗ್ಗೆ ವಾಣಿಜ್ಯ ಸಚಿವಾಲಯಕ್ಕೆ ಮನವಿ ಮಾಡಿರಬಹುದು, ಆದರೆ ನಮ್ಮ ಕಡೆಯಿಂದ ಚರ್ಚೆ ಮಾಡುವಂತಹ ಅಗತ್ಯವಿಲ್ಲ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಇನ್ನು ಈ ಬಗ್ಗೆ ವಾಣಿಜ್ಯ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಸಹ ಸ್ಪಷ್ಟನೆ ನೀಡಿದ್ದು ರೂಪಾಯಿಯನ್ನು ಅಪಮೌಲ್ಯಗೊಳಿಸುವ ವಿಚಾರದ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದ್ದಾರೆ. ರೂಪಾಯಿ ಅಪಮೌಲ್ಯಗೊಳಿಸುವ ವಿಚಾರ ಆಧಾರ ರಹಿತ ಹಾಗೂ ಅಪ್ರಸ್ತುತ ಎಂದು ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com