ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟರೂ ಭಾರತಕ್ಕೆ ಪಾಕ್ ರಫ್ತು ಏರಿಕೆ!

ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ, ಕುಲಭೂಷಣ್ ಜಾಧವ್ ಪ್ರಕರಣ ಸೇರಿದಂತೆ ಹಲವು ಕಾರಣಗಳಿಂದ ಪಾಕಿಸ್ತಾನ-ಭಾರತ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದರೂ ಭಾರತಕ್ಕೆ ಪಾಕಿಸ್ತಾನದ ರಫ್ತು ಏರಿಕೆ ಕಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟರೂ ಭಾರತಕ್ಕೆ ಪಾಕ್ ರಫ್ತು ಏರಿಕೆ!
ದ್ವಿಪಕ್ಷೀಯ ಬಾಂಧವ್ಯ ಹದಗೆಟ್ಟರೂ ಭಾರತಕ್ಕೆ ಪಾಕ್ ರಫ್ತು ಏರಿಕೆ!
ಇಸ್ಲಾಮಾಬಾದ್: ಗಡಿಯಲ್ಲಿ ನಿರಂತರ ಕದನ ವಿರಾಮ ಉಲ್ಲಂಘನೆ, ಕುಲಭೂಷಣ್ ಜಾಧವ್ ಪ್ರಕರಣ ಸೇರಿದಂತೆ ಹಲವು ಕಾರಣಗಳಿಂದ ಪಾಕಿಸ್ತಾನ-ಭಾರತ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದ್ದರೂ ಭಾರತಕ್ಕೆ ಪಾಕಿಸ್ತಾನದ ರಫ್ತು ಏರಿಕೆ ಕಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 
ಸ್ಟೇಟ್ ಬ್ಯಾಂಕ್ ಆಫ್ ಪಾಕಿಸ್ತಾನದ ಇತ್ತೀಚಿನ ವರದಿಯ ಪ್ರಕಾರ 2016-17 ನೇ ಆರ್ಥಿಕ ವರ್ಷದ ಮೊದಲ 8 ತಿಂಗಳಲ್ಲಿ ಭಾರತಕ್ಕೆ ಪಾಕಿಸ್ತಾನದ ರಫ್ತು ಪ್ರಮಾಣ ಏರಿಕೆ ಕಂಡಿದ್ದು, ಭಾರತದಿಂದ ಪಾಕಿಸ್ತಾನ ಆಮದು ಮಾಡಿಕೊಳ್ಳುತ್ತಿರುವ ಪ್ರಮಾಣ ಶೇ.23 ರಷ್ಟು ಏರಿಕೆಯಾಗಿದೆ ಎಂದು ಡಾನ್ ಪತ್ರಿಕೆ ವರದಿ ಮಾಡಿದೆ. 
ರಫ್ತು ಪ್ರಮಾಣ ಏರಿಕೆಯಾಗಿರುವ ಸಂದರ್ಭಗಳಲ್ಲಿ ಭಾರತದ ಮೇಲೆ ಪಾಕಿಸ್ತಾನ ನಿರಂತರ ದಾಳಿ ನಡೆಸಿದ್ದು, ಭಾರತ-ಪಾಕ್ ದ್ವಿಪಕ್ಷೀಯ ಸಂಬಂಧ ಮತ್ತಷ್ಟು ಹದಗೆಟ್ಟಿದೆ. ಆದರೆ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿರುವುದು ದ್ವಿಪಕ್ಷೀಯ ವ್ಯಾಪಾರ-ವಹಿವಾಟುಗಳ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ ಎಂಬುದು ಸ್ಪಷ್ಟವಾಗಿದೆ. 
ಜುಲೈ-ಫೆಬ್ರವರಿ ತಿಂಗಳಲ್ಲಿ ಪಾಕಿಸ್ತಾನದ ರಫ್ತು 286 ಮಿಲಿಯನ್ ಡಾಲರ್ ನಷ್ಟಿದ್ದು,  ಆಮದು ಶೇ.23 ರಷ್ಟು ಕುಸಿದಿದ್ದು ಕಳೆದ ವರ್ಷವಿದ್ದ 1,244 ಮಿಲಿಯನ್ ಡಾಲರ್ ನಿಂದ 958 ಮಿಲಿಯನ್ ಡಾಲರ್ ನಷ್ಟಾಗಿದೆ. ಆದರೆ ವಹಿವಾಟು ಸಮತೋಲನ ಭಾರತದ ಪರವಾಗಿದೆ ಎಂದು ಡಾನ್ ವರದಿ ಮಾಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com