ಸುಮಾರು 11.44 ಲಕ್ಷ ನಕಲಿ ಪಾನ್ ಕಾರ್ಡ್ ರದ್ದು: ಕೇಂದ್ರ ಸರ್ಕಾರ

ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಹಲವು ಪಾನ್ ಕಾರ್ಡ್ ಗಳನ್ನು ಹೊಂದಿದ ಪ್ರಕರಣಗಳಲ್ಲಿ ಸುಮಾರು 11.44ಲಕ್ಷಕ್ಕೂ ಹೆಚ್ಚು ನಕಲಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಒಬ್ಬ ವ್ಯಕ್ತಿಯ ಹೆಸರಿನಲ್ಲಿ ಹಲವು ಪಾನ್ ಕಾರ್ಡ್ ಗಳನ್ನು ಹೊಂದಿದ ಪ್ರಕರಣಗಳಲ್ಲಿ ಸುಮಾರು 11.44ಲಕ್ಷಕ್ಕೂ ಹೆಚ್ಚು ನಕಲಿ ಪಾನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ಬುಧವಾರ ಸಂಸತ್ತಿಗೆ ತಿಳಿಸಿದೆ.
ಈ ಕುರಿತು ಹಣಕಾಸು ಖಾತೆ ರಾಜ್ಯ ಸಚಿವ ಸಂತೋಷ್ ಕುಮಾರ್ ಗಂಗ್ವಾರ್ ಅವರು ಇಂದು ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ.
ಕಳೆದ ಜುಲೈ 27ರ ವರೆಗೆ ಒಟ್ಟು 11,44,211 ನಕಲಿ ಪಾನ್ ಕಾರ್ಡ್ ಗಳನ್ನು ಗುರುತಿಸಲಾಗಿದ್ದು, ಅವುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಒಬ್ಬ ವ್ಯಕ್ತಿಗೆ ಒಂದು ಪಾನ್ ಕಾರ್ಡ್ ಎಂಬ ನಿಯಮ ಇದೆ. ಆದರೆ ಹಲವರು ನಕಲಿ ದಾಖಲೆಗಳನ್ನು ನೀಡಿ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಗಳನ್ನು ಪಡೆಯುವ ಮೂಲಕ ತೆರಿಗೆ ವಂಚಿಸುತ್ತಿದ್ದಾರೆ ಎಂದು ಗಂಗ್ವಾರ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com