ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಇನ್ಫೋಸಿಸ್ ಸಿಇಒ, ಎಂಡಿ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ್ದಾರೆ.
ಸಂಸ್ಥೆಯನ್ನು ಬಿಟ್ಟು ಹೋಗುವ ಉದ್ಯೋಗಿಗಳಿಗೆ ಕೊನೆಯಲ್ಲಿ ಹೆಚ್ಚಿನ ವೇತನ ನೀಡಲಾಗುತ್ತಿದ್ದ ಬಗ್ಗೆ ಇನ್ಫೋಸಿಸ್ ಆಡಳಿತ ಮಂಡಳಿ, ಸ್ಥಾಪಕರ ನಡುವೆ ಭಿನ್ನಾಭಿಪ್ರಾಯ ತಲೆದೋರಿತ್ತು, ಈ ನಡುವೆಯೇ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿರುವುದು ಮಹತ್ವಪಡೆದುಕೊಂಡಿದೆ.
ವಿಶಾಲ್ ಸಿಕ್ಕಾ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಯುಬಿ ಪ್ರವೀಣ್ ರಾವ್ ಅವರನ್ನು ಹಂಗಾಮಿ ಸಿಇಒ, ಎಂಡಿ ಆಗಿ ನೇಮಕ ಮಾಡಲಾಗಿದೆ.