ಕೇಂದ್ರ ಸಚಿವ ಅರುಣ್ ಜೇಟ್ಲಿ
ಕೇಂದ್ರ ಸಚಿವ ಅರುಣ್ ಜೇಟ್ಲಿ

ಆದಾಯ ತೆರಿಗೆ ಸಲ್ಲಿಕೆ ಗಡುವು ವಿಸ್ತರಣೆಗೆ ಕೇಂದ್ರ ಸರ್ಕಾರ ಚಿಂತನೆ!

ಪ್ರಸಕ್ತ ಸಾಲಿನ ಆದಾಯ ತೆರಿಗೆ ಸಲ್ಲಿಕೆ ಪ್ರಕ್ರಿಯೆ ಕೇಂದ್ರ ಸರ್ಕಾರ ಈ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ಪರಿಷ್ಕರಿಸುವು ಕುರಿತು ಕೇಂದ್ರ ವಿತ್ತ ಇಲಾಖೆ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ನವದೆಹಲಿ: ಪ್ರಸಕ್ತ ಸಾಲಿನ ಆದಾಯ ತೆರಿಗೆ ಸಲ್ಲಿಕೆ ಪ್ರಕ್ರಿಯೆ ಕೇಂದ್ರ ಸರ್ಕಾರ ಈ ಹಿಂದೆ ವಿಧಿಸಿದ್ದ ಕಾಲಮಿತಿಯನ್ನು ಪರಿಷ್ಕರಿಸುವು ಕುರಿತು ಕೇಂದ್ರ ವಿತ್ತ ಇಲಾಖೆ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಇದೇ ಜುಲೈ 31ಕ್ಕೆ ಆದಾಯ ತೆರಿಗೆ ಸಲ್ಲಿಕೆಯ ಅಂತಿಮ ಗಡುವು ಮುಕ್ತಾಯವಾಗಿದ್ದು, ನಿರೀಕ್ಷಿತ ಮಟ್ಟದಲ್ಲಿ ಆದಾಯ ತೆರಿಗೆ ಸಲ್ಲಿಕೆಯಾಗದ ಹಿನ್ನಲೆಯಲ್ಲಿ ಗಡುವನ್ನು ವಿಸ್ತರಣೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು  ಹೇಳಲಾಗುತ್ತಿದೆ. ಅದರಂತೆ ಈಗಿರುವ ಜುಲೈ 31ರ ಗಡುವನ್ನು ಇನ್ನೂ ಒಂದು ತಿಂಗಳಿಗೆ ವಿಸ್ತರಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆಯಲ್ಲಿ ತೊಡಗಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ವಿತ್ತ ಇಲಾಖೆಯ ಅಧಿಕಾರಿಗಳೊಂದಿಗೆ  ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸತತ ಚರ್ಚೆ ನಡೆಸುತ್ತಿದ್ದು, ಶೀಘ್ರದಲ್ಲೇ ಈ ಬಗ್ಗೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಅಂತೆಯೇ ಪ್ರಸಕ್ತ ಸಾಲಿನ ಆದಾಯ ತೆರಿಗೆ ಪಾವತಿ ಸಂದರ್ಭದಲ್ಲಿ ಗ್ರಾಹಕರು ಸಾಕಷ್ಟು ಹೊಸ ಸವಾಲುಗಳನ್ನು ಎದುರಿಸುತ್ತಿದ್ದು, ಬಹುಶಃ ಇದು ಆದಾಯ ತೆರಿಗೆ ಸಂಗ್ರಹದ ವಿಳಂಬಕ್ಕೆ ಕಾರಣವಿರಬಹುದು ಎಂದು ತಜ್ಞರು  ಅಭಿಪ್ರಾಯಪಟ್ಟಿದ್ದಾರೆ. ಜಿಎಸ್ ಟಿ ಮತ್ತು ಹೊಸ ವಿಧಾನದ ತೆರಿಗೆ ಪಾವತಿ ಕ್ರಮಗಳೂ ಕೂಡ ಆದಾಯತೆರಿಗೆ ಸಲ್ಲಿಕೆಯಲ್ಲಿ ವಿಳಂಬವಾಗುತ್ತಿದೆ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಅವಧಿ ವಿಸ್ತರಣೆಗೆ ಕೇಂದ್ರ ಸರ್ಕಾರ  ಮುಂದಾಗಿದೆ.

ಇನ್ನು ಪ್ಯಾನ್ ಕಾರ್ಡ್-ಆಧಾರ್ ಜೋಡಣೆ ಪ್ರಕ್ರಿಯೆಯಲ್ಲೂ ವಿಳಂಬವಾಗಿದ್ದು, ಈ ವರೆಗೂ ಕೇವಲ ಶೇ.45ರಷ್ಟು ತೆರಿಗೆ ಪಾವತಿದಾರರು ಮಾತ್ರ ತಮ್ಮ ಆಧಾರ್-ಪ್ಯಾನ್ ಜೋಡಣೆ ಮಾಡಿದ್ದಾರೆ. ಅಂತೆಯೇ ಅಸ್ಸಾಂ ಮತ್ತು ಉತ್ತರ  ಭಾರತದ ಹಲವು ರಾಜ್ಯಗಳಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿ ಕೂಡ ತೆರಿಗೆ ಪಾವತಿದಾರರ ಮೇಲೆ ಪರಿಣಾಮ ಬೀರಿದೆ ಎಂದು ಹೇಳಲಾಗುತ್ತಿದೆ.

Related Stories

No stories found.

Advertisement

X
Kannada Prabha
www.kannadaprabha.com