ಜು.31ರೊಳಗೆ ಐಟಿ ರಿಟರ್ನ್ಸ್‌ ಫೈಲ್ ಮಾಡಿ, ಗಡುವು ವಿಸ್ತರಣೆ ಇಲ್ಲ: ಆದಾಯ ತೆರಿಗೆ ಇಲಾಖೆ

2016-17ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌(ಐಟಿಆರ್‌) ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಜುಲೈ 31ರ ಗಡುವನ್ನು...
ಬೆಂಗಳೂರಿನಲ್ಲಿ ವಿಶೇಷ ಮೇಳ
ಬೆಂಗಳೂರಿನಲ್ಲಿ ವಿಶೇಷ ಮೇಳ
ನವದೆಹಲಿ: 2016-17ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್‌(ಐಟಿಆರ್‌) ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದ್ದು, ಜುಲೈ 31ರ ಗಡುವನ್ನು ವಿಸ್ತರಿಸುವ ಯಾವುದೇ ಯೋಚನೆ ನಮ್ಮ ಮುಂದೆ ಇಲ್ಲ ಎಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ರಿಟರ್ನ್ಸ್‌ ಫೈಲ್ ಮಾಡಲು ಜುಲೈ 31 ಕೊನೆಯ ದಿನವಾಗಿದ್ದು, ಇದನ್ನು ವಿಸ್ತರಿಸುವ ಯೋಚನೆ ಇಲ್ಲ. ಇಲಾಖೆಗೆ ಈಗಾಗಲೇ 2 ಕೋಟಿ ಐಟಿ ರಿಟರ್ನ್ಸ್ ಫೈಲ್ ಮಾಡಲಾಗಿದೆ. ಉಳಿದವರು ನಿಗದಿತ ಅವಧಿಯಲ್ಲೇ ಫೈಲ್ ಮಾಡಬೇಕು ಎಂದು ಮನವಿ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ವೇತನದಾರರು ಮತ್ತು ಪಿಂಚಣಿದಾರರಿಗೆ ರಿರ್ಟನ್ಸ್‌ ಸಲ್ಲಿಕೆಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಆದಾಯ ತೆರಿಗೆ ಇಲಾಖೆ ಬೆಂಗಳೂರಿನ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಜು.29ರಿಂದ 31ರವರೆಗೆ ಮೂರು ದಿನಗಳ ವಿಶೇಷ ಮೇಳ ಆಯೋಜಿಸಿದೆ. ರಿಟರ್ನ್ಸ್ ಸಲ್ಲಿಕೆಗಾಗಿ ಇಲ್ಲಿ 54 ವಿಶೇಷ ಕೌಂಟರ್‌ಗಳನ್ನು ತೆರೆಯಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com