ಪ್ರಸಕ್ತ ವರ್ಷ ಇನ್ಫೋಸಿಸ್ ನಿಂದ 20 ಸಾವಿರ ಉದ್ಯೋಗ

ಈ ವರ್ಷ 20 ಸಾವಿರ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಇನ್ಫೊಸಿಸ್‌ ಸಿಒಒ ಯು.ಬಿ. ಪ್ರವೀಣ್‌ ರಾವ್‌...
ಇನ್ಫೋಸಿಸ್
ಇನ್ಫೋಸಿಸ್
Updated on
ನವದೆಹಲಿ: ಈ ವರ್ಷ 20 ಸಾವಿರ ಹೊಸ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು  ಇನ್ಫೊಸಿಸ್‌ ಸಿಒಒ ಯು.ಬಿ. ಪ್ರವೀಣ್‌ ರಾವ್‌ ಹೇಳಿದ್ದಾರೆ. 
ಐಟಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಅವರ ಜೊತೆಗಿನ ಸಭೆಯ ನಂತರ ಮಾತನಾಡಿದ ಪ್ರವೀಣ್ ರಾವ್ 
ಭಾರಿ ಪ್ರಮಾಣದಲ್ಲಿ ಉದ್ಯೋಗ ಕಡಿತ ಮಾಡಲಾಗುತ್ತಿದೆ ಎಂಬ ವರದಿಗಳನ್ನು ಸ್ಪಷ್ಟವಾಗಿ ತಳ್ಳಿ ಹಾಕಿದರು, ಈ ವರದಿಗಳು ಉತ್ಪ್ರೇಕ್ಷೆಯಿಂದ ಕೂಡಿವೆ ಎಂದು ಹೇಳಿದ್ದಾರೆ.
ಕಳಪೆ ಸಾಧನೆ ಆಧಾರದ ಮೇಲೆ 300- 400 ಸಿಬ್ಬಂದಿಯನ್ನು ಕೆಲಸದಿಂದ ವಜಾ ಮಾಡುತ್ತಿರುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ಉದ್ಯೋಗ ಸೃಷ್ಟಿಸುವಲ್ಲಿ ಇನ್ಫೊಸಿಸ್‌ ಮುಂಚೂಣಿಯಲ್ಲಿದೆ. ಕಾರ್ಯಕ್ಷಮತೆ ಆಧಾರದ ಮೇಲೆ ಕೆಲವರನ್ನು ಕೆಲಸದಿಂದ ತೆಗೆಯುವುದನ್ನೇ  ದೊಡ್ಡ ವಿಷಯವನ್ನಾಗಿ ಬಿಂಬಿಸುವುದು ಬೇಡ ಎಂದು  ಮನವಿ ಮಾಡಿದ್ದಾರೆ.
ಕಳೆದ ವರ್ಷ ಕೂಡ ಕಂಪೆನಿ 20,000 ಸಿಬ್ಬಂದಿ ನೇಮಕ ಮಾಡಿಕೊಂಡಿತ್ತು. ಅಷ್ಟೇ ಸಂಖ್ಯೆಯ ಸಿಬ್ಬಂದಿಯನ್ನು ಈ ವರ್ಷವೂ ನೇಮಕ ಮಾಡಿಕೊಳ್ಳಲಾಗುವುದು. ಮೊದಲ 6 ತಿಂಗಳಲ್ಲಿ ಹತ್ತು ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು’ ಎಂದು ರಾವ್‌ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com