ಅಕ್ಟೋಬರ್ ತಿಂಗಳ ಹಣದುಬ್ಬರ 7 ತಿಂಗಳಲ್ಲೇ ಗರಿಷ್ಠ

ಸುಮಾರು ಒಂದು ವರ್ಷಗಳ ನಂತರ ದೈನಂದಿನ ಆಹಾರ ವಸ್ತುಗಳ ಮತ್ತು ತೈಲ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದರ ಪರಿಣಾಮ ಅಕ್ಟೋ ಬರ್ ತಿಂಗಳ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸುಮಾರು ಒಂದು ವರ್ಷಗಳ ನಂತರ ದೈನಂದಿನ ಆಹಾರ ವಸ್ತುಗಳ ಮತ್ತು ತೈಲ ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದರ ಪರಿಣಾಮ ಅಕ್ಟೋ ಬರ್ ತಿಂಗಳ ಸಗಟು ಧಾರಣೆ ಆಧರಿಸಿದ ಹಣದುಬ್ಬರ ಶೇ.3.58ಕ್ಕೆ ಏರಿಕೆಯಾಗಿದ್ದು, ಇದು ಕಳೆದ ಏಳು ತಿಂಗಳಲ್ಲೇ ಅತಿ ಹೆಚ್ಚು ಎಂದು ಸೋಮವಾರ ಸರ್ಕಾರಿ ಅಂಕಿ ಅಂಶಗಳಿಂದ ತಿಳಿದು ಬಂದಿದೆ.
ಸಗಟು ಧಾರಣೆ ಸೂಚ್ಯಂಕ(ಸಿಪಿಐ) ಆಧರಿಸಿದ ಹಣದುಬ್ಬರ ಸೆಪ್ಟೆಂಬರ್‌ ನಲ್ಲಿ ಶೇ 3.28ರಷ್ಟಿತ್ತು. ಅಕ್ಟೋಬರ್ ತಿಂಗಳ ಹಣದುಬ್ಬರ 3.46ರಷ್ಟು ಹೆಚ್ಚಾಗುವ ನಿರೀಕ್ಷೆ ಇತ್ತು. ಆದರೆ ಅದು 3.58ಕ್ಕೆ ಏರಿಕೆಯಾಗಿದೆ.
ಕಳೆದ ಶುಕ್ರವಾರ ಕೇಂದ್ರ ಸರ್ಕಾರ 178 ವಸ್ತುಗಳ ಮೇಲಿನ ಜಿಎಸ್ ಟಿ ತೆರಿಗೆಯನ್ನು ಶೇ.18ಕ್ಕೆ ಇಳಿಕೆ ಮಾಡಿವುದರಿಂದ ಮುಂದಿನ ದಿನಗಳಲ್ಲಿ ಹಣದುಬ್ಬರ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಕೆಲವು ವಿಶ್ಲೇಷಕರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com