ಮೋದಿ ಸರ್ಕಾರಕ್ಕೆ ಮೂಡಿಸ್‌ ಮೇಲೆ ದಿಢೀರ್ ಲವ್: ಚಿದಂಬರಂ ವ್ಯಂಗ್ಯ

ಅಂತರಾಷ್ಟ್ರೀಯ ರೇಟಿಂಗ್ ಸಂಸ್ಥೆ ಮೂಡಿಸ್ ಮೇಲೆ ಕೇಂದ್ರ ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಪ್ರೀತಿ ಹುಟ್ಟಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ....
ಪಿ.ಚಿದಂಬರಂ
ಪಿ.ಚಿದಂಬರಂ
ಮುಂಬೈ: ಅಂತರಾಷ್ಟ್ರೀಯ ರೇಟಿಂಗ್ ಸಂಸ್ಥೆ ಮೂಡಿಸ್ ಮೇಲೆ ಕೇಂದ್ರ ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಪ್ರೀತಿ ಹುಟ್ಟಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು ಶನಿವಾರ ವ್ಯಂಗ್ಯವಾಡಿದ್ದಾರೆ.
ಕೆಲವು ತಿಂಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮೂಡಿಸ್ ರೇಟಿಂಗ್ ವಿಧಾನವನ್ನು ಟೀಕಿಸಿತ್ತು. ಮೂಡಿಸ್ ರೇಟಿಂಗ್ ವಿಧಾನ ಸಂಪೂರ್ಣ ತಪ್ಪು ಎಂದು ಮಾಜಿ ಹಣಕಾಸು ಕಾರ್ಯದರ್ಶಿ ಶಕ್ತಿಕಾಂತ್ ದಾಸ್ ಅವರು ಸುದೀರ್ಘ ಪತ್ರ ಬರೆದಿದ್ದರು. ಅಲ್ಲದೆ ಆ ಪತ್ರದಲ್ಲಿ ರೇಟಿಂಗ್ ವಿಧಾನವನ್ನು ಪರಿಷ್ಕರಿಸುವಂತೆ ಮನವಿ ಮಾಡಿದ್ದರು ಎಂದು ಚಿದಂಬರಂ ಅವರು ಟಾಟಾ ಲಿಟರೇಚರ್ ಲೈವ್ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.
ಜಾಗತಿಕ ಸಾಲ ಮೌಲ್ಯಮಾಪನ ಸಂಸ್ಥೆ ಮೂಡಿಸ್‌ ಇನ್‌ವೆಸ್ಟರ್‌ ಸರ್ವಿಸ್‌, ಹದಿಮೂರು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಭಾರತದ ಸಾಲ ಮರುಪಾವತಿ ಸಾಮರ್ಥ್ಯವನ್ನು ‘ಬಿಎಎ3’ಯಿಂದ ‘ಬಿಎಎ2’ಶ್ರೇಣಿಗೆ ಹೆಚ್ಚಿಸಿತ್ತು. 
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಹಲವು ಸುಧಾರಣಾ ಕ್ರಮಗಳನ್ನು ಜಾರಿಗೆ ತಂದಿರುವುದರಿಂದ ದೇಶದ ಆರ್ಥಿಕ ಸ್ಥಿತಿ ಮೇಲ್ದರ್ಜೆಗೆ ಏರುತ್ತಿದೆ ಎಂದು ಮೂಡಿಸ್ ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com