ವಾಣಿಜ್ಯ

ಅ.4 ಕ್ಕೆ ಆರ್ ಬಿಐ ಹಣಕಾಸು ನೀತಿ ಪ್ರಕಟ: ಬಡ್ಡಿದರ ಯಥಾಸ್ಥಿತಿ ಸಾಧ್ಯತೆ

ಅಕ್ಟೋಬರ್ 4 ರಂದು ಆರ್ ಬಿಐ ನೂತನ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಅ.4 ಕ್ಕೆ ಆರ್ ಬಿಐ ಹಣಕಾಸು ನೀತಿ ಪ್ರಕಟ: ಬಡ್ಡಿದರ ಯಥಾಸ್ಥಿತಿ ಸಾಧ್ಯತೆ
ಆರ್ ಬಿಐ
Published On :
ಮುಂಬೈ: ಅಕ್ಟೋಬರ್ 4 ರಂದು ಆರ್ ಬಿಐ ನೂತನ ಹಣಕಾಸು ನೀತಿಯನ್ನು ಪ್ರಕಟಿಸಲಿದ್ದು, ಬಡ್ಡಿ ದರದಲ್ಲಿ ಯಥಾ ಸ್ಥಿತಿ ಕಾಯ್ದುಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 
ಕಸ್ಟಮರ್ ಪ್ರೈಸ್ ಇಂಡೆಕ್ಸ್(ಸಿಪಿಐ) ಹಣದುಬ್ಬರ ಆಗಸ್ಟ್ ನಲ್ಲಿ ಶೇ.3.36 ರಷ್ಟಿದ್ದು ಬಡ್ಡಿ ದರದಲ್ಲಿ ಬದಲಾವಣೆಯಾಗುವ ಸಾಧ್ಯತೆ ಇಲ್ಲ ಎಂಬ ನಿರೀಕ್ಷೆ ಇದೆ. ಕಳೆದ ತಿಂಗಳುಗಳಿಗಿಂತ ಹಣದುಬ್ಬರ ಪ್ರಮಾಣ ಏರಿಕೆಯಾಗಿದ್ದು, ಆರ್ ಬಿಐ ನ ವಿತ್ತೀಯ ನೀತಿ ಸಮಿತಿ ಎದುರು ಹಣದುಬ್ಬರವನ್ನು ಕಡಿಮೆ ಮಾಡುವ ಸವಾಲು ಇದೆ. 
ಆಗಸ್ಟ್ ನಲ್ಲಿ ಪ್ರಕಟವಾಗಿದ್ದ ದ್ವೈಮಾಸಿಕ ನೀತಿಯಲ್ಲಿ ಸೆಂಟ್ರಲ್ ಬ್ಯಾಂಕ್ ವಾಣಿಜ್ಯ ಬ್ಯಾಂಕ್ ಗಳಿಗೆ ನೀಡಲಾಗುತ್ತಿದ್ದ ಸಾಲದ ಮೇಲಿನ ಬಡ್ಡಿ ದರವನ್ನು 25 ಬಿಪಿಎಸ್ ನಷ್ಟು ಕಡಿಮೆ ಮಾಡಿತ್ತು. ಈಗ ಆರ್ ಬಿಐ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.