ಸೂಕ್ತ ಖರೀದಿದಾರರು ಸಿಕ್ಕರೆ ಇದೇ ಹಣಕಾಸು ವರ್ಷದಲ್ಲೇ ಏರ್ ಇಂಡಿಯಾ ಮಾರಾಟ

ಕೇಂದ್ರ ಸರ್ಕಾರ ಸೂಕ್ತ ಖರೀದಿದಾದರು ಸಿಕ್ಕರೆ ಏರ್ ಇಂಡಿಯಾವನ್ನು ಇದೇ ಹಣಕಾಸು ವರ್ಷದಲ್ಲಿ ಮಾರಾಟ ಮಾಡುವ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಸರ್ಕಾರ ಸೂಕ್ತ ಖರೀದಿದಾದರು ಸಿಕ್ಕರೆ ಏರ್ ಇಂಡಿಯಾವನ್ನು ಇದೇ ಹಣಕಾಸು ವರ್ಷದಲ್ಲಿ ಮಾರಾಟ ಮಾಡುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸರ್ಕಾರಿ ಸ್ವಾಮ್ಯದ ವಿವಿದ ಕಂಪನಿಗಳಲ್ಲಿನ ಬಂಡವಾಳ ಹಿಂತೆಗೆತಕ್ಕೆ ಪ್ರಕ್ರಿಯೆ ಪರಿಶೀಲಿಸುವುದಕ್ಕಾಗಿ ಇಂದು ಬೆಳಗ್ಗೆಯಷ್ಟೇ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನೇತೃತ್ವದ ಸಚಿವರ ಸಮಿತಿ ಸಭೆ ಸೇರಿತ್ತು. ಸಭೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು, ನಗರಾಭಿವೃದ್ಧಿ ಸಚಿವ ಹರ್ದೀಪ್ ಸಿಂಗ್ ಪುರಿ, ರೈಲ್ವೆ ಸಚಿವ ಪಿಯೂಷ್ ಗೋಯಲ್ ವಾಣಿಜ್ಯ ಮತ್ತು ಕೈಗಾರಿಕೆ ಸಚಿವೆ ಸುರೇಶ್ ಪ್ರಭು, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಅನಂತ್ ಕುಮಾರ್ ಹಾಗೂ ಬೃಹತ್ ಕೈಗಾರಿಕೆ ಸಚಿವ ಅನಂತ್ ಗೀತೆ ಅವರು ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಸೂಕ್ತ ಖರೀದಿದಾದರು ಸಿಕ್ಕರೆ ನಷ್ಟದಲ್ಲಿರುವ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾವನ್ನು ಇದೇ ಆರ್ಥಿಕ ವರ್ಷದಲ್ಲಿ ಮಾರಾಟ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
ಕೇಂದ್ರ ಸಚಿವ ಸಂಪುಟವು ಕಳೆದ ಜೂನ್‌ನಲ್ಲಿ ಏರ್‌ ಇಂಡಿಯಾದಿಂದ ಬಂಡವಾಳ ಹಿಂತೆಗೆತ ಪ್ರಕ್ರಿಯೆಗೆ ಅನುಮೋದನೆ ನೀಡಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com