ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಕಡ್ಡಾಯ ಕುರಿತು ಯಾವುದೇ ಸೂಚನೆ ನೀಡಿಲ್ಲ: ಆರ್‏ಬಿಐ

ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಖಾತೆ ರದ್ದುಗೊಳಿಸುವುದಾಗಿ ಹಲವು ಬ್ಯಾಂಕ್ ಗಳು ಬೆದರಿಕೆ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬ್ಯಾಂಕ್ ಖಾತೆಗೆ ನಿಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡದಿದ್ದರೆ ಖಾತೆ ರದ್ದುಗೊಳಿಸುವುದಾಗಿ ಹಲವು ಬ್ಯಾಂಕ್ ಗಳು ಬೆದರಿಕೆ ಹಾಕುತ್ತಿರುವ ಬೆನ್ನಲ್ಲೇ, ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಗಳಿಗೆ ಇದುವರೆಗೂ ಯಾವುದೇ ಸೂಚನೆ ನೀಡಿಲ್ಲ ಎಂದು ಆರ್ ಬಿಐ ಗುರುವಾರ ಸ್ಪಷ್ಟಪಡಿಸಿದೆ.
ಈ ಸಂಬಂಧ ಸುದ್ದಿ ವೆಬ್ ಸೈಟ್ moneylife.in ನ ಯೋಗೇಶ್ ಸಪ್ಕಳೆ ಅವರು ಸಲ್ಲಿಸಿದ್ದ ಆರ್ ಟಿಐ ಅರ್ಜಿಗೆ ಕೇಂದ್ರೀಯ ಬ್ಯಾಂಕ್ ಈ ಮಾಹಿತಿ ನೀಡಿದೆ.
ಬ್ಯಾಂಕ್ ಖಾತೆಗಳಿಗೆ ಆಧಾರ್ ಕಡ್ಡಾಯಗೊಳಿಸುವ ವಿಚಾರ ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದ್ದಾಗಿದ್ದು, ಇದರಲ್ಲಿ ಕೇಂದ್ರೀಯ ಬ್ಯಾಂಕ್ ನ ಪಾತ್ರವಿಲ್ಲ ಎಂದು ಆರ್ ಬಿಐ ಆರ್ ಟಿಐ ಅರ್ಜಿಗೆ ಉತ್ತರಿಸಿದೆ.
ಕೇಂದ್ರ ಸರ್ಕಾರ ಜೂನ್ 1, 2017ರಿಂದ ಬ್ಯಾಂಕ್ ಖಾತೆ ತೆರೆಯಲು ಮತ್ತು ಪಾನ್ ಕಾರ್ಡ್ ಹೊಂದಲು ಆಧಾರ್ ಕಾರ್ಡ್ ಕಡ್ಡಾಯ ನಿಯಮ ಜಾರಿಗೆ ತಂದಿದೆ. ಆದರೆ ಈ ಸಂಬಂಧ ಕೇಂದ್ರೀಯ ಬ್ಯಾಂಕ್ ಯಾವುದೇ ಅಧಿಸೂಚನೆ ಹೊರಡಿಸಿಲ್ಲ ಎಂದು ಆರ್ ಬಿಐ ಸ್ಪಷ್ಟಪಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com