ಅಧಿಕಾರಕ್ಕೆ ಬಂದ ನಂತರ ನಾವು ದೀರ್ಘಾವಧಿ ಸುಧಾರಣೆಗಳ ಬಗ್ಗೆ ಗಮನ ಹರಿಸಿದ್ದೇವೆ, ಮುಂದಿನ 30 ವರ್ಷಗಳ ವರೆಗೆ ಸ್ಥಿರ ಆಡಳಿತ ನೀಡುವುದು ನಮ್ಮ ಉದ್ದೇಶವಾಗಿದೆ ಎಂದು ಅಮಿತ್ ಷಾ ಹೇಳಿದ್ದಾರೆ. 3 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದ ಬಿಜೆಪಿ ದೇಶದ ಜನತೆಯ ಚಿಂತನಾ ವಿಧಾನವನ್ನು ಬದಲಾವಣೆ ಮಾಡಿದ್ದು, ಬ್ರಾಂಡ್ ಇಂಡಿಯಾವನ್ನು ಸೃಷ್ಟಿಸುವಲ್ಲಿ ಯಶಸ್ವಿಯಾಗಿದ್ದು, ಸುಧಾರಣೆಗಳನ್ನು ಜಾರಿಗೆ ತರುವುದೇ ನಮ್ಮ ಗುರಿಯಾಗಿದೆ ಎಂದು ಹೇಳಿದ್ದಾರೆ.