ಏರ್ ಸೆಲ್ -ಮ್ಯಾಕ್ಸಿಸ್ ಪ್ರಕರಣ: ಕಾರ್ತಿ ಚಿದಂಬರಂಗೆ ಸಿಬಿಐ ಸಮನ್ಸ್

ಏರ್ ಸೆಲ್ - ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ....
ಕಾರ್ತಿ ಚಿದಂಬರಂ
ಕಾರ್ತಿ ಚಿದಂಬರಂ
Updated on: 
ನವದೆಹಲಿ: ಏರ್ ಸೆಲ್ - ಮ್ಯಾಕ್ಸಿಸ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಬುಧವಾರ ಸಿಬಿಐ ಸಮನ್ಸ್ ಜಾರಿ ಮಾಡಿದೆ.
ಇದಕ್ಕೂ ಮುನ್ನ ಜುಲೈ 5ರಂದು ಅಕ್ರಮ ಹಣ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಕಾರ್ತಿ ಚಿದಂಬರಂ ಅವರಿಗೆ ಸಮನ್ಸ್ ನೀಡಿತ್ತು. ಈಗ ಸಿಬಿಐ ಕಾರ್ತಿ ಚಿದಂಬರಂ ಸಮನ್ಸ್ ನೀಡಿದ್ದು, ಏರ್ ಸೆಲ್-ಮ್ಯಾಕ್ಸಿಸ್ ಹಗರಣಕ್ಕೆ ಸಂಬಂಧಿಸಿದಂತೆ ನಿಮ್ಮ ಹಣಕಾಸು ದಾಖಲೆಗಳೊಂದಿಗೆ ಒಂದು ವಾರದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
2015ರಿಂದಲೇ ಪ್ರಕರಣದ ತನಿಖೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಕಾರ್ತಿ ಚಿದಂಬರಂ ಅವರಿಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ.

ಚಿದಂಬರಂ ಅವರು ಹಣಕಾಸು ಸಚಿವರಾಗಿದ್ದ ಸಂದರ್ಭದಲ್ಲಿ ಏರ್ ಸೆಲ್ -ಮ್ಯಾಕ್ಸಿಸ್ ಸಂಸ್ಥೆಗೆ ವಿದೇಶಿ ಹೂಡಿಕೆ ಪಡೆದುಕೊಳ್ಳಲು ಕಾನೂನುಬಾಹಿರವಾಗಿ ಅನುಮೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್‌ ಅವರನ್ನು ವಿಚಾರಣೆ ನಡೆಸಲು ಸಿಬಿಐ ಉದ್ದೇಶಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com