ಇನ್ನು ಕಳೆದೊಂದು ವಾರದಿಂದ ಸತತವಾಗಿ ಪೆಟ್ರೋಲ್ ಡೀಸೆಲ್ ದರಗಳಲ್ಲಿ ಏರಿಕೆಯಾಗುತ್ತಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪೆಟ್ರೋಲಿಯಂ ಸಚಿವರು, ಅಮೆರಿಕದ ಟೆಕ್ಸಾಸ್ ನಲ್ಲಿ ಉಂಟಾದ ಚಂಡಮಾರುತದಿಂದಾಗಿ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಉತ್ಪಾದನೆಯಲ್ಲಿ ಶೇ.13ರಷ್ಟು ಕಡಿತವಾಗಿದೆ. ಹೀಗಾಗಿ ಪೆಟ್ರೋಲ್ ಕೊರತೆ ಎದುರಾಗಿದ್ದು, ಇದರಿಂದಾಗಿಯೇ ದರ ಏರಿಕೆಯಾಗುತ್ತಿದೆ. ಇನ್ನೊಂದು ವಾರದಲ್ಲಿ ಮತ್ತೆ ಪರಿಸ್ಥಿತಿ ಸಮಾನ್ಯವಾಗಲಿದೆ ಎಂದು ಪ್ರಧಾನ್ ಹೇಳಿದ್ದಾರೆ.