ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು: ಗ್ರಾಹಕರಿಗೇನು ಲಾಭ?

ಪೇಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ....
ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು?
ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳು?
ನವದೆಹಲಿ: ಪೇಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರಬೇಕು ಎಂದು ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿಕೆ ನೀಡಿದ್ದ ಬೆನ್ನಲ್ಲೇ ಕೇಂದ್ರ ಸರ್ಕಾರ ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುತ್ತದೆಯೇ ಎಂಬ ಪ್ರಶ್ನೆ ಎದುರಾಗಿದೆ. 
ಧರ್ಮೇಂದ್ರ ಪ್ರಧಾನ್ ಸಲಹೆ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಮಾರುಕಟ್ಟೆ ವಿಶ್ಲೇಷಕರ ಪ್ರಕಾರ ಜಿಎಸ್ ಟಿ ವ್ಯಾಪ್ತಿಗೆ ಪೆಟ್ರೋಲಿಯಂ ಉತ್ಪನ್ನಗಳನ್ನು ತರುವುದರಿಂದ ಗ್ರಾಹಕರಿಗೆ ಅನುಕೂಲವಾಗಲಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್ ಟಿ ವ್ಯಾಪ್ತಿಗೆ ತರುವುದರಿಂದ ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಭಾರಿ ಪ್ರಮಾಣದಲ್ಲಿ ಇಳಿಕೆಯಾಗಲಿದೆ. ಒಂದು ವೇಳೆ ಶೇ.12 ರ ತೆರಿಗೆ ವ್ಯಾಪ್ತಿಗೆ ಉತ್ಪನ್ನಗಳನ್ನು ತಂದರೆ ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 38.1 ರೂಪಾಯಿಗೆ ಪೆಟ್ರೋಲ್ ಸಿಗುತ್ತದೆ. 
ಶೇ.18 ರಷ್ಟು ತೆರಿಗೆ ವ್ಯಾಪ್ತಿಗೆ ತರುವುದಾದರೆ 40.5 ರೂಪಾಯಿಗೆ, ಶೇ.28 ರಷ್ಟು ತೆರಿಗೆ ವ್ಯಾಪ್ತಿಗೆ ತಂದರೆ 43.44 ರೂಪಾಯಿಗಳಿಗೆ ಪೆಟ್ರೋಲಿಯಂ ಉತ್ಪನ್ನಗಳು ಗ್ರಾಹಕರಿಗೆ ಸಿಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com