ಆರ್ಥಿಕತೆಯನ್ನು ಮೇಲೆತ್ತಲು ಸರ್ಕಾರದಿಂದ ಹೆಚ್ಚುವರಿ ಕ್ರಮಗಳು: ವಿತ್ತ ಸಚಿವ ಅರುಣ್ ಜೇಟ್ಲಿ

ಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರ್ಥಿಕತೆಯನ್ನು ಮೇಲೆತ್ತುವುದಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ಅರುಣ್ ಜೇಟ್ಲಿ
ಅರುಣ್ ಜೇಟ್ಲಿ
Updated on: 
ನವದೆಹಲಿ: ಹಣದುಬ್ಬರ ನಿಯಂತ್ರಣದಲ್ಲಿದೆ ಎಂದು ಹೇಳಿರುವ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರ್ಥಿಕತೆಯನ್ನು ಮೇಲೆತ್ತುವುದಕ್ಕೆ ಕೇಂದ್ರ ಸರ್ಕಾರ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 
ಜಿಡಿಪಿ ದರ ಕಳೆದ 3 ವರ್ಷಗಳಲ್ಲಿಯೇ ಶೇ.5.7 ಕ್ಕೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಸಮಾಲೋಚನೆ ನಡೆಸಿ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗುವ ರೀತಿಯಲ್ಲಿ ಕೇಂದ್ರ ಸರ್ಕಾರ ಕ್ರಮಗಳನ್ನು ಕೈಗೊಳ್ಳುವುದಾಗಿ ಅರುಣ್ ಜೇಟ್ಲಿ ತಿಳಿಸಿದ್ದಾರೆ. 
ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವ ಹಿನ್ನೆಲೆಯಲ್ಲಿ ಹಿರಿಯ ಸಚಿವರುಗಳೊಂದಿಗೆ ಸಮಾಲೋಚನೆ ನಡೆಸಿರುವ ಅರುಣ್ ಜೇಟ್ಲಿ ಆರ್ಥಿಕ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com