ಪಿಎನ್ಬಿ ವಂಚನೆ: ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದ ಸಿಬಿಐ

ವಜ್ರ ವ್ಯಾಪಾರಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರುಗಳು ನಡೆಸಿದ್ದ 13,500 ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣಕ್ಕೆ...........
ಪಿಎನ್ಬಿ ವಂಚನೆ: ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದ ಸಿಬಿ
ಪಿಎನ್ಬಿ ವಂಚನೆ: ರಿಸರ್ವ್ ಬ್ಯಾಂಕ್ ಅಧಿಕಾರಿಗಳನ್ನು ಪ್ರಶ್ನಿಸಿದ ಸಿಬಿ
ನವದೆಹಲಿ: ವಜ್ರ ವ್ಯಾಪಾರಿ ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿ ಅವರುಗಳು ನಡೆಸಿದ್ದ 13,500 ಕೋಟಿ ರೂ. ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್ಬಿ) ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಅಧಿಕಾರಿಗಳನ್ನು ಸಿಬಿಐ ಪ್ರಶ್ನಿಸಿದೆ.
ಹೀಗೆ ಸಿಬಿಐ ನಿಂದ ತನಿಖೆಗೊಲಪಟ್ಟವರಲ್ಲಿ ಮೂವರು ಆರ್ ಬಿಐನ ಮುಖ್ಯವ್ಯವಸ್ಥಾಪಕ ನಿರ್ದೇಶಕರಾದರೆ ಓರ್ವರು ಸಾಮಾನ್ಯ ವ್ಯವಸ್ಥಾಪಕರಾಗಿದ್ದಾರೆ.
ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರು 80:20 ರ ಚಿನ್ನದ ಆಮದು ಯೋಜನೆ ಜಾರಿ ಮಾಡಿದ ಬಳಿಕ  ಚೋಕ್ಸಿ ಒಡೆತನದ ಸಂಸ್ಥೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗಿತ್ತೆ ಎನ್ನುವ ಕುರಿತಂತೆ ಸಿಬಿಐ ಅಧಿಕಾರಿಗಳು ಕೇಂದ್ರ ಬ್ಯಾಂಕಿನ ಅಧಿಕಾಇಗಳನ್ನು ಪ್ರಶ್ನಿಸಿದ್ದಾರೆ ಎಂದು ಮೂಲಗಳು ತಿಳಿಸಿದೆ.
ನೀರವ್ ಮೋದಿ ಹಾಗೂ ಗೀತಾಂಜಲಿ ಗ್ರೂಪ್ನ ಪ್ರವರ್ತಕ ಚೋಕ್ಸಿ 2013ರಿಂದಲೂ ಭಾರತ ಶ್ರೀಮಂತರ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದರು. ಆದರೆ ಇದೇ ಫೆಬ್ರವರಿಯಲ್ಲಿ ಈ ಇಬ್ಬರೂ ಸೇರಿ ಪಿಎನ್ಬಿಗೆ 13,500 ಕೋಟಿ ರೂ.ಗಳನ್ನು ವಂಚಿಸಿದ್ದಾರೆ ಎಂಬ ಅಂಶ ಬೆಳಕಿಗೆ ಬರುತ್ತಲೆ ದೇಶದ ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ಅಲ್ಲೋಲ ಕಲ್ಲೋಲವಾಗಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com