ಸಾಂದರ್ಭಿಕ ಚಿತ್ರ
ವಾಣಿಜ್ಯ
ಐಡಿಬಿಐ ಬ್ಯಾಂಕ್ ಮೇಲೆ 3 ಕೋಟಿ ರೂ. ವಿತ್ತೀಯ ದಂಡ ವಿಧಿಸಿದ ಆರ್ ಬಿಐ
ಮರು ಪಾವತಿಸದ ಸಾಲಗಳಿಗೆ ಸಂಬಂಧಿಸಿದಂತೆ ನಿಯಾಮಾವಳಿ ಪಾಲಿಸದ ಹಿನ್ನೆಲೆಯಲ್ಲಿ ಐಡಿಬಿಐ ಬ್ಯಾಂಕಿನ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಸುಮಾರು 3 ಕೋಟಿ ರೂಪಾಯಿ ದಂಡ ವಿಧಿಸಿದೆ.
ನವದೆಹಲಿ : ಮರು ಪಾವತಿಸದ ಸಾಲಗಳಿಗೆ ಸಂಬಂಧಿಸಿದಂತೆ ನಿಯಾಮಾವಳಿ ಪಾಲಿಸದ ಹಿನ್ನೆಲೆಯಲ್ಲಿ ಐಡಿಬಿಐ ಬ್ಯಾಂಕಿನ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ಸುಮಾರು 3 ಕೋಟಿ ರೂಪಾಯಿ ದಂಡ ವಿಧಿಸಿದೆ.
ಆದಾಯ ಗುರುತಿಸುವಿಕೆ ಹಾಗೂ ಆಸ್ತಿ ವರ್ಗೀಕರಣ ನಿಯಮಗಳಲ್ಲಿ ನಿರ್ದೇಶನ ಪಾಲಿಸದ ಹಿನ್ನೆಲೆಯಲ್ಲಿ ದಂಡ ವಿಧಿಸಿರುವುದಾಗಿ ಅಧಿಕೃತ ನೋಟಿಸ್ ನಲ್ಲಿ ಆರ್ ಬಿಐ ಹೇಳಿದೆ.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ 1949ರ ಸೆಕ್ಷನ್ 47( ಎ) (ಸಿ) , 46 (4) ರ ಅಡಿಯಲ್ಲಿ ಈ ದಂಡ ವಿಧಿಸಲಾಗಿದೆ ಎಂದು ಆರ್ ಬಿ ಐ ನೀಡಿರುವ ನೋಟಿಸ್ ನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ