ಇನ್ನು ಮಾರುಕಟ್ಟೆ ಪರಿಸ್ಥಿತಿಯನ್ನು ಕೇಂದ್ರ ವಿತ್ತ ಸಚಿವಾಲಯ ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದು, ಈ ಬಗ್ಗೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಅವರು, ಮಾರುಕಟ್ಟೆ ಪರಿಸ್ಥಿತಿಯನ್ನು ಸಚಿವಾಲಯ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ. ಹೂಡಿಕೆದಾರರು ಆತಂಕ ಪಡುವ ಅಗತ್ಯವಿಲ್ಲ. ಭಾರತೀಯ ಆರ್ಥಿಕತೆ ಸ್ಥಿರವಾಗಿದ್ದು, ಅಸ್ಥಿರವಾದ ಅಂತಾರಾಷ್ಟ್ರೀಯ ಆರ್ಥಿಕ ವಾತಾವರಣಕ್ಕೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.