ಭಾರತೀಯ ಅಂಚೆಯ 'ಪೇಮೆಂಟ್ಸ್ ಬ್ಯಾಂಕ್' ಸೆ.1 ರಂದು ಉದ್ಘಾಟನೆ; ಪ್ರಧಾನಿ ಮೋದಿ ಚಾಲನೆ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 1ರಂದು ಭಾರತೀಯ ಅಂಚೆ ಹಣ ಪಾವತಿ ...
ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 1ರಂದು ಭಾರತೀಯ ಅಂಚೆಯ ಪೇಮೆಂಟ್ಸ್ ಬ್ಯಾಂಕ್ (ಐಪಿಪಿಬಿ)ಅನ್ನು ಉದ್ಘಾಟಿಸಲಿದ್ದಾರೆ. ಪ್ರತಿ ಜಿಲ್ಲೆಯಲ್ಲಿ ಇದರ ಒಂದು ಶಾಖೆಗಳಿರಲಿದ್ದು ಗ್ರಾಮೀಣ ಭಾಗದಲ್ಲಿ ಹಣಕಾಸು ಸೇವೆಯನ್ನು ಗುರಿಯಾಗಿಟ್ಟುಕೊಂಡು ಈ ಸೇವೆಯನ್ನು ಒದಗಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನ ಮಂತ್ರಿಯವರು ಈ ಸೇವೆಗೆ ಚಾಲನೆ ನೀಡಲಿದ್ದಾರೆ. ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ನಿಧನದ ಹಿನ್ನಲೆಯಲ್ಲಿ ಏಳು ದಿನಗಳ ಶೋಕಾಚರಣೆಯಿಂದಾಗಿ ಈ ಹಣಕಾಸು ಸೇವೆ ಬ್ಯಾಂಕಿನ ಉದ್ಘಾಟನೆ ಮುಂದೂಡಲ್ಪಟ್ಟಿತ್ತು.

ದೇಶದ 1.55 ಲಕ್ಷ ಅಂಚೆ ಕಚೇರಿ ಶಾಖೆಗಳನ್ನು ಐಪಿಪಿಬಿ ಸೇವೆ ತಲುಪಲಿದ್ದು ಗ್ರಾಮೀಣ ಪ್ರದೇಶದ ಜನರಿಗೆ ಹಣಕಾಸು ಸೇವೆ ಒದಗಿಸಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com