ಪ್ರಮುಖವಾಗಿ ರೂಪಾಯಿ ಮೌಲ್ಯ ಏರಿಕೆಗೆ ಅಮೆರಿಕ ಮಾರುಕಟ್ಟೆಯಲ್ಲಿನ ನೀರಸ ವಹಿವಾಟು ಕಾರಣ ಎಂದು ಹೇಳಲಾಗುತ್ತಿದ್ದು, ಇತ್ತೀಚೆಗೆ ಅಮೆರಿಕ ಸರ್ಕಾರ ಕೈಗೊಂಡ ಕಠಿಣ ಆರ್ಥಿಕ ನೀತಿಯಿಂದಾಗಿ ಷೇರುಮಾರುಕಟ್ಟೆಯಲ್ಲಿ ವಹಿವಾಟು ನೀರಸಗತಿಯಲ್ಲಿ ಸಾಗಿದೆ. ಇದು ಭಾರತೀಯ ರೂಪಾಯಿ ಮೌಲ್ಯದ ಮೇಲೆಯೂ ಪರಿಣಾಮ ಬೀರಿದೆ. ಅಲ್ಲದೆ ದೇಶೀಯ ಸಂಸ್ಥೆಗಳ ಷೇರುಗಳ ಖರೀದಿಗೆ ಉಂಟಾದ ಬೇಡಿಕೆ ಕೂಡ ರೂಪಾಯಿ ಮೌಲ್ಯ ಏರಿಕೆಗೆ ಕಾರಣ ಎನ್ನಲಾಗುತ್ತಿದೆ ಎಂದು ಹೇಳಲಾಗುತ್ತಿದೆ.