ಪೆಟ್ರೋಲ್ ಬೆಲೆಯಲ್ಲಿ 20 ಪೈಸೆ, ಡೀಸೆಲ್ ಬೆಲೆಯಲ್ಲಿ 22 ಪೈಸೆ ಇಳಿಕೆ!

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ  ಕಚ್ಚಾ ತೈಲ ಬೆಲೆಯಲ್ಲಿ ಗಣನೀಯ ಇಳಿಕೆ ಕಂಡುಬಂದ ಹಿನ್ನಲೆಯಲ್ಲಿ ದೇಶದಲ್ಲಿ ಪೆಟೋಲ್ ದರದಲ್ಲಿ 19 ರಿಂದ 20 ಪೈಸೆ ಮತ್ತು ಡೀಸೆಲ್ ದರದಲ್ಲಿ 22 ಪೈಸೆಯಷ್ಟು ಇಳಿಕೆ ಕಂಡುಬಂದಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 19 ಪೈಸೆಯಷ್ಟು ಇಳಿಕೆಯಾಗಿ ಪೆಟ್ರೋಲ್‌ ದರ ಲೀಟರ್‌ಗೆ 70.81 ರೂಗೆ ಇಳಿಕೆಯಾಗಿದೆ. ಅಂತೆಯೇ ಡೀಸೆಲ್‌ ದರ 64.51 (20 ಪೈಸೆ ಇಳಿಕೆ) ರೂ ಇದೆ. 
ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಲೀಟರ್‌ ಪೆಟ್ರೋಲ್‌ ದರ 70.27 ರೂ (19 ಪೈಸೆ ಇಳಿಕೆ), ಮತ್ತು ಡೀಸೆಲ್‌ ದರ 64.19 ರೂ (20 ಪೈಸೆ ಇಳಿಕೆ) ಇದೆ.  ದೇಶದ ವಾಣಿಜ್ಯ ರಾಜಧಾನಿ ಮುಂಬಯಿಯಲ್ಲಿ ಇಂದಿನ ಪೆಟ್ರೋಲ್‌ ದರ 75.86 ರೂ (18 ಪೈಸೆ ಇಳಿಕೆ), ಡೀಸೆಲ್ ಬೆಲೆ 67.14 ರೂ (22 ಪೈಸೆ ಇಳಿಕೆ) ಆಗಿದೆ.  ಕೋಲ್ಕತದಲ್ಲಿ ಇಂದಿನ ಪೆಟ್ರೋಲ್‌ ಬೆಲೆ 72.33 ರೂ (18 ಪೈಸೆ ಇಳಿಕೆ) ಮತ್ತು ಡೀಸೆಲ್ ಬೆಲೆ 65.92 ರೂ (20 ಪೈಸೆ ಇಳಿಕೆ) ಗಳಾಗಿವೆ. ಚೆನ್ನೈನಲ್ಲಿ ಇಂದಿನ ಪೆಟ್ರೋಲ್‌ ಬೆಲೆ 72.88 ರೂ. (20 ಪೈಸೆ ಇಳಿಕೆ), ಡೀಸೆಲ್‌ ಬೆಲೆ 67.74 ರೂ (21 ಪೈಸೆ ಇಳಿಕೆ) ಆಗಿದೆ. 
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಇಂದಿನ ಬೆಲೆ 3,240 ರೂ (5 ರೂ ಇಳಿಕೆ) ಆಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com