ಈಗಾಗಲೇ ಕೇಂದ್ರ ಸರ್ಕಾರ ಬಿಟ್ ಕಾಯಿನ್ ಒಳಗೊಂಡು ಎಲ್ಲಾ ರೀತಿಯ ಕ್ರಿಪ್ಟೊ ಕರೆನ್ಸಿಗಳ ವಹಿವಾಟಿಗೆ ಕಾನೂನಿನ ಮಾನ್ಯತೆ ಇಲ್ಲ ಮತ್ತು ಅದರ ಬಳಕೆಯನ್ನು ಸಂಪೂರ್ಣ ನಿಷೇಧಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ಸಹ ಈ ವರ್ಷದ ಬಜೆಟ್ ಮಂಡಿಸುವಾಗ, ಬಿಟ್ ಕಾಯಿನ್ ಕರೆನ್ಸಿಗೆ ನಮ್ಮ ದೇಶದಲ್ಲಿ ಮಾನ್ಯತೆ ಇಲ್ಲ ಎಂದು ಹೇಳಿದ್ದರು.