29 ವಸ್ತುಗಳ ಮೇಲಿನ ಜಿಎಸ್ ಟಿ ಕಡಿತ, ಕರಕುಶಲ ವಸ್ತುಗಳಿಗೆ ಯಾವುದೇ ತೆರಿಗೆ ಇಲ್ಲ

ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಂಡಳಿಯು ಒಟ್ಟು 29 ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಗುರುವಾರ ನಿರ್ಧರಿಸಿದ್ದು,....
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಅರುಣ್ ಜೇಟ್ಲಿ
ಜಿಎಸ್ ಟಿ ಮಂಡಳಿ ಸಭೆಯಲ್ಲಿ ಅರುಣ್ ಜೇಟ್ಲಿ
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ) ಮಂಡಳಿಯು ಒಟ್ಟು 29 ವಸ್ತುಗಳ ಮೇಲಿನ ತೆರಿಗೆಯನ್ನು ಕಡಿತಗೊಳಿಸಲು ಗುರುವಾರ ನಿರ್ಧರಿಸಿದ್ದು, ಮುಖ್ಯವಾಗಿ ಕರಕುಶಲ ವಸ್ತುಗಳಿಗೆ ಶೇ. ಶೂನ್ಯ ತೆರಿಗೆ ವ್ಯಾಪ್ತಿಗೆ ತರಲಾಗಿದೆ ಎಂದು ಉತ್ತರಾಖಂಡ್ ಹಣಕಾಸು ಸಚಿವ ಪ್ರಕಾಶ್ ಪಂತ್ ಅವರು ತಿಳಿಸಿದ್ದಾರೆ.
ಜಿಎಸ್ ಟಿ ಮಂಡಳಿ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪಂತ್ ಅವರು, ಇಂದು ನಡೆದ 25ನೇ ಸಭೆಯಲ್ಲಿ 29 ವಸ್ತುಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಜಿಎಸ್ ಟಿ ರಿಟರ್ನ್ ಸರಳಗೊಳಿಸುವ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ ಎಂದರು.
10 ದಿನಗಳ ನಂತರ ಜಿಎಸ್ ಟಿ ಮಂಡಳಿ ವಿಡಿಯೋ ಕಾನ್ಫೆರೆನ್ಸಿಂಗ್ ಮೂಲಕ ಮತ್ತೊಂದು ಸಭೆ ನಡೆಸುತ್ತಿದ್ದು, ಈ ವೇಳೆ ಜಿಎಸ್ ಟಿ ರಿಟರ್ನ್ ಸರಳಗೊಳಿಸುವ ಕುರಿತು ಚರ್ಚಿಸಲಾಗುವುದು ಎಂದು ಪಂತ್ ತಿಳಿಸಿದ್ದಾರೆ. ಅಲ್ಲದೆ ಇತರೆ 49 ವಸ್ತುಗಳ ಮೇಲಿನ ಜಿಎಸ್ ಟಿ ಕಡಿತಗೊಳಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದರು.
ಫೆಬ್ರವರಿ 1ರಂದು ಕೇಂದ್ರ ಬಜೆಟ್‌ ಮಂಡನೆಯಾಗಲಿದ್ದು, ಇದಕ್ಕೂ ಮುನ್ನ ನಡೆದ ಮಹತ್ವದ ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪ್ರಮುಖ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com