ಕಳೆದ ವರ್ಷದ ಸೆಪ್ಟೆಂಬರ್‌ನಿಂದ ಉದ್ಯಮ ಮತ್ತು ಅದರ ಪಾಲುದಾರರ ಜತೆಗೆ ಹಲವಾರು ಸುತ್ತಿನ ಮಾತುಕತೆ ನಡೆಸಿದ ಬಳಿಕ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಟ್ರಾಯ್ ತಿಳಿಸಿದೆ. ಆದರೆ ವಿಮಾನ 3000 ಮೀಟರ್‌ಗಿಂತ ಮೇಲೆ ಹಾರಲು ಆರಂಭಿಸಿದ ಬಳಿಕ ಇಂಟರ್‌ನೆಟ್ ಸಂಪರ್ಕ ನೀಡಬಹುದು ಎನ್ನುವುದು ಟ್ರಾಯ್ ಸಲಹೆ. ವಿಮಾನ ಟೇಕಾಫ್ ಆಗಿ ನಾಲ್ಕೈದು ನಿಮಿಷದಲ್ಲೇ 3000 ಮೀಟರ್‌ಗಿಂತ ಹೆಚ್ಚಿನ ಎತ್ತರ ತಲುಪುತ್ತದೆ.