ಇಂದು ಪೆಟ್ರೋಲ್ ದರಲ್ಲಿ 15 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ ಕೂಡ 15 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 78.06ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 72.74ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 15ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರ 83.57 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 16 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 76.22ಕ್ಕೆ ಇಳಿಕೆಯಾಗಿದೆ.