ಶುಕ್ರವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ. ಡಾಲರ್ ಎದುರು ಇಂದು ರೂಪಾಯಿ ಮೌಲ್ಯದಲ್ಲಿ 35 ಪೈಸೆಯಷ್ಟು ಏರಿಕೆ ಕಂಡುಬಂದಿದೆ. ಪ್ರಮುಖವಾಗಿ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ತೈಲದರ ಇಳಿಕೆ ಮತ್ತು ಅಮೆರಿಕ ಮಧ್ಯಂತರ ಚುನಾವಣೆ ಹಿನ್ನಲೆಯಲ್ಲಿ ರೂಪಾಯಿ ಮೌಲ್ಯದಲ್ಲಿ ಏರಿಕೆ ಕಂಡುಬಂದಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.