'ದುರ್ವರ್ತನೆ ಆರೋಪ'ದಿಂದ ಆಘಾತವಾಗಿದೆ: ಬಿನ್ನಿ ಬನ್ಸಾಲ್‌

ನನ್ನ ವಿರುದ್ಧ ಮಾಡಲಾಗಿರುವ ಗಂಭೀರ ಸ್ವರೂಪದ ವೈಯಕ್ತಿಕ ದುರ್ವರ್ತನೆ ಆರೋಪದಿಂದ ನನಗೆ ಆಘಾತವಾಗಿದೆ...
ಬಿನ್ನಿ ಬನ್ಸಾಲ್
ಬಿನ್ನಿ ಬನ್ಸಾಲ್
ನವದೆಹಲಿ: ನನ್ನ ವಿರುದ್ಧ ಮಾಡಲಾಗಿರುವ ಗಂಭೀರ ಸ್ವರೂಪದ ವೈಯಕ್ತಿಕ ದುರ್ವರ್ತನೆ ಆರೋಪದಿಂದ ನನಗೆ ಆಘಾತವಾಗಿದೆ ಎಂದು ದೇಶದ ಅತಿ ದೊಡ್ಡ ಇ-ಕಾಮರ್ಸ್‌ ಸಂಸ್ಥೆ ಫ್ಲಿಪ್ ಕಾರ್ಟ್‌ ಸಹ ಸಂಸ್ಥಾಪಕ ಬಿನ್ನಿ ಬನ್ಸಾಲ್‌ ಅವರು ಹೇಳಿದ್ದಾರೆ.
ಫ್ಪಿಪ್ ಕಾರ್ಟ್ ಸಿಇಒ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ನನ್ನ ವಿರುದ್ಧ ಮಾಡಲಾಗಿರುವ ಆರೋಪದಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ಆಘಾತವಾಗಿದೆ. ನನ್ನ ವಿರುದ್ಧದ ಆರೋಪ ಸತ್ಯಕ್ಕೆ ದೂರವಾಗಿದ್ದು, ತನಿಖೆಯ ನಂತರ ಎಲ್ಲವೂ ತಿಳಿಯಲಿದೆ. ಸದ್ಯ ನಾನು ಸಿಇಒ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಸಂಸ್ಥೆಯ ನಿರ್ದೇಶಕ ಮಂಡಳಿಯಲ್ಲಿ ದೊಡ್ಡ ಪಾಲುದಾರನಾಗಿ ಮುಂದುವರೆಯುವೆ ಎಂದು ಸಂಸ್ಥೆಯ ಸಿಬ್ಬಂದಿಗೆ ಬರೆದ ಮೇಲ್ ನಲ್ಲಿ ತಿಳಿಸಿದ್ದಾರೆ.
ಇದಕ್ಕೂ ಮುನ್ನ, ಬನ್ಸಾಲ್ ಅವರ ವಿರುದ್ಧ ಗಂಭೀರ ಸ್ವರೂಪದ ವೈಯಕ್ತಿಕ ದುರ್ವರ್ತನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ ಬನ್ಸಾಲ್ ಅವರು ತಮ್ಮ ವಿರುದ್ಧದ ಆರೋಪಗಳನ್ನು ಬಲವಾಗಿ ತಳ್ಳಿಹಾಕಿದ್ದಾರೆ ಎಂದು ಫ್ಲಿಪ್ ಕಾರ್ಟ್ ಸ್ವಾಧೀನಪಡಿಸಿಕೊಂಡಿರುವ ವಾಲ್ ಮಾರ್ಟ್ ಪ್ರಕಟಣೆಯಲ್ಲಿ ತಿಳಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com