ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಇಂದೂ ಕೂಡ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ. ಇಂದು ಪೆಟ್ರೋಲ್ ದರಲ್ಲಿ 18 ಪೈಸೆಯಷ್ಟು ಇಳಿಕೆಯಾಗಿದ್ದು, ಡೀಸೆಲ್ ದರದಲ್ಲಿ 16 ಪೈಸೆಯಷ್ಟು ಇಳಿಕೆ ಕಂಡು ಬಂದಿದೆ. ರಾಜಧಾನಿ ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 77.10ರೂಗೆ ಇಳಿಕೆಯಾಗಿದ್ದು, ಡೀಸೆಲ್ ದರ 71.93 ಕ್ಕೆ ಇಳಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲೂ ಪೆಟ್ರೋಲ್ ದರದಲ್ಲಿ 18ಪೈಸೆಯಷ್ಟು ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 11 ಪೈಸೆಯಷ್ಟು ಇಳಿಕೆಯಾಗಿದೆ. ಆ ಮೂಲಕ ಪ್ರತೀ ಲೀಟರ್ ಪೆಟ್ರೋಲ್ ದರ 82.62 ರೂಗಳಿಗೆ ಇಳಿಕೆಯಾಗಿದ್ದು, ಡೀಸೆಲ್ ದರ ಕೂಡ 17 ಪೈಸೆಯಷ್ಟು ಕಡಿಮೆಯಾಗಿ ಪ್ರತೀ ಲೀಟರ್ ಡೀಸೆಲ್ ದರ 75.36ಕ್ಕೆ ಇಳಿಕೆಯಾಗಿದೆ.