ಆರ್‏ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಇಲ್ಲ,

ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ನವದೆಹಲಿ: ರೆಪೋ ದರ ಮತ್ತು ರಿವರ್ಸ್ ರೆಪೋ ದರಗಳಲ್ಲಿ ಯಾವುದೇ ಬದಲಾವಣೆ ಮಾಡದೇ ಇರಲು ಭಾರತೀಯ ರಿಸರ್ವ್ ಬ್ಯಾಂಕ್(ಆರ್​ಬಿಐ) ಶುಕ್ರವಾರ ನಿರ್ಧರಿಸಿದೆ.
ರೆಪೋ ದರಗಳನ್ನು ಶೇ. 6.50ರ ದರದಲ್ಲಿ ಮತ್ತು ರಿವರ್ಸ್ ರೆಪೋ ದರವನ್ನು ಶೇ.6.25ರ ದರದಲ್ಲಿಯೇ ಮುಂದುವರೆಸಲು ಆರ್​ಬಿಐ ತೀರ್ಮಾನಿಸಿದೆ.
ಈ ಹಿಂದೆ ರೆಪೋ ಮತ್ತು ರಿವರ್ಸ್ ರೆಪೋ ದರವನ್ನು ಎರಡು ಬಾರಿ ಏರಿಸಿದ್ದ ಆರ್ ಬಿಐ ಈ ಬಾರಿ ಯಾವುದೇ ಬದಲಾವಣೆ ಮಾಡದೆ ಯಥಾಸ್ಥಿತಿ ಕಾಯ್ದು ಕೊಂಡಿದೆ.  
ರುಪಾಯಿ ಮೌಲ್ಯ ಕುಸಿತ ಹಾಗೂ ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಆರ್ ಬಿಐ ರೆಪೋ ದರವನ್ನು ಶೇ.  25 ಮೂಲಾಂಶಗಳಷ್ಟು ಏರಿಕೆ ಮಾಡುವ ನಿರೀಕ್ಷೆ ಇತ್ತು. ಆದರೆ ಮಾರುಕಟ್ಟೆ ಸ್ಥಿರತೆಗಾಗಿ ಈ ಕ್ರಮ ಜರುಗಿಸಲಾಗಿದೆ ಎಂದು ಆರ್ ಬಿಐ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com