ತೈಲ ಬೆಲೆ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ: ಧರ್ಮೇಂದ್ರ ಪ್ರಧಾನ್

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಅಸಹಜ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ...
ಧರ್ಮೇಂದ್ರ ಪ್ರಧಾನ್
ಧರ್ಮೇಂದ್ರ ಪ್ರಧಾನ್
ಭುವನೇಶ್ವರ: ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಅಸಹಜ ಏರಿಕೆಗೆ ಅಮೆರಿಕದ ಪ್ರತ್ಯೇಕ ನೀತಿಯೇ ಕಾರಣ ಎಂದು ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಶನಿವಾರ ಆರೋಪಿಸಿದ್ದಾರೆ. 
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಜನಸಾಮಾನ್ಯರಿಗೆ ಹೊರಗೆಯಾಗುತ್ತಿದ್ದು, ಹೊರೆ ತಗ್ಗಿಸಲು ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಪ್ರಧಾನ್ ತಿಳಿಸಿದ್ದಾರೆ.
ಇದೇ ವೇಳೆ ಆರ್ಥಿಕತೆಯ ಮೇಲೆ ಹಿಡಿತ ಸಾಧಿಸಲು ಯತ್ನಿಸುತ್ತಿರುವ ಅಮೆರಿಕದ ನೀತಿಯಿಂದಾಗಿ ಮತ್ತು ಡಾಲರ್ ಎದುರು ರುಪಾಯಿ ಮೌಲ್ಯ ಕುಸಿತದಿಂದ ತೈಲ ಬೆಲೆ ಏರಿಕೆಯಾಗುತ್ತಿದೆ ಎಂದರು.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯನ್ನು ತನ್ನ ನಿಯಂತ್ರಣದಲ್ಲಿಟ್ಟುಕೊಳ್ಳಲು ಅಮೆರಿಕ ಯತ್ನಿಸುತ್ತಿದೆ. ಇದರಿಂದ ಡಾಲರ್ ಬೆಲೆ ಕೂಡ ಏರಿಕೆಯಾಗಿದೆ, ಡಾಲರ್ ಎದುರು ರುಪಾಯಿ ಮೌಲ್ಯ ಕಡಿಮೆಯಾಗುತ್ತಿದ್ದು, ತೈಲ ಮಾರುಕಟ್ಟೆಯ ಮೇಲೆ ನೇರ ಪರಿಣಾಮ ಬೀರಿದೆ ಎಂದು ಪ್ರಧಾನ್ ಹೇಳಿದ್ದಾರೆ.
ತೈಲ ಬೆಲೆಯೇರಿಕೆ ಮತ್ತು ರುಪಾಯಿ ಮೌಲ್ಯ ಕುರಿತು ಕೇಂದ್ರ ಸರ್ಕಾರ ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಜನಸಾಮಾನ್ಯರಿಗೆ ಹೊರೆಯಾಗದಂತೆ ನಿಭಾಯಿಸಲಿದೆ. ದೇಶದ ಆರ್ಥಿಕತೆಗೆ ಇವೆರಡೂ ಸವಾಲೊಡ್ಡುತ್ತಿದ್ದು, ಸಮಸ್ಯೆ ಸೃಷ್ಟಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com