ಮತ್ತೆ ತೈಲೋತ್ಪನ್ನಗಳ ದರ ಏರಿಕೆ: ಪೆಟ್ರೋಲ್ ದರ ಎಷ್ಟು ಗೊತ್ತಾ?

ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಗಗನದತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮತ್ತೆ ಏರಿಕೆಯಾಗಿದ್ದು, ಶನಿವಾರ ಒಂದೇ ದಿನ ಪೆಟ್ರೋಲ್ ಪ್ರತೀ ಲೀಟರ್ ಗೆ 22 ಪೈಸೆಯಷ್ಟು ಏರಿಕೆಯಾಗಿದೆ.
ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 22 ಪೈಸೆಯಷ್ಟು ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆಯಷ್ಟು ಏರಿಕೆಯಾಗಿದೆ. 
ದೆಹಲಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 83.40ರೂ ಗೆ ಏರಿಕೆಯಾಗಿದ್ದು, ಡೀಸೆಲ್ 74.63ಕ್ಕೆ ಏರಿಕೆಯಾಗಿದೆ. ಇನ್ನು ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ 90.75 ರೂಗೆ ಏರಿಕೆಯಾಗಿದ್ದು, ಪ್ರತೀ ಲೀಟರ್ ಡೀಸೆಲ್ ದರ 79.23 ರೂಗೆ ಏರಿಕೆಯಾಗಿದೆ.
ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತೀ ಲೀಟರ್ ಪೆಟ್ರೋಲ್ ದರ 84.19 ರೂಗೆ ಏರಿಕೆಯಾಗಿದ್ದು, ಡೀಸೆಲ್ ದರ 75.09ರೂಗೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದರಲ್ಲಿ ಗಣನೀಯ ಏರಿಕೆಯಾಗುತ್ತಿರುವುದು ಇಂಧನ ದರ ಏರಿಕೆಗೆ ಕಾರಣ ಎನ್ನವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com