ಮುಂಬೈ: ವಿವಿಧ ಬ್ಯಾಂಕಿಂಗ್ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ, ಎಚ್ ಡಿಎಫ್ ಸಿ, ಕೋಟಾಕ್ ಮಹೀಂದ್ರಾ ಬ್ಯಾಂಕ್ ಸೇರಿದಂತೆ ಏಳು ಬ್ಯಾಂಕ್ ಗಳಿಗೆ ಆರ್ ಬಿಐ ದಂಡ ವಿಧಿಸಿದೆ.
ಅಲಹಾಬಾದ್ ಬ್ಯಾಂಕ್, ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಇಂಡಿಯನ್ ಓವರ್ ಸೀಸಿ ಬ್ಯಾಂಕ್ ಗಳು ಆರ್ ಬಿಐ ನಿಧಿ ಬಳಕೆ, ಮೇಲ್ವಿಚಾರಣೆಯಲ್ಲಿ ವಂಚನೆ ಸೇರಿ ಹಲವು ನಿಯಮಗಳ ಉಲ್ಲಂಘನೆಗಾಗಿ 1.5 ಕೋಟಿ ರೂ ದಂಡ ವಿಧಿಸಿದೆ. ಇದೇ ರೀತಿಆಂಧ್ರ ಬ್ಯಾಂಕ್ ಗೆ 1 ಕೋಟಿ ರೂ. ದಂಡ ವಿಧಿಸಲಾಗಿದೆ.
ಇನ್ನು ನಿಮ್ಮ ಗ್ರಾಹಕರ ಬಗ್ಗೆ ತಿಳಿಯಿರಿ (ಕೆವೈಸಿ) ಮಾನದಂಡಗಳನ್ನು ಮತ್ತು ಅಕ್ರಮ ಹಣ ವರ್ಗಾವಣೆ ಸಂಬಂಧ ಎಚ್ ಡಿಎಫ್ ಸಿ ಬ್ಯಾಂಕ್, ಐಡಿಬಿಐ ಬ್ಯಾಂಕ್ ಮತ್ತು ಕೋಟಾಕ್ ಮಹೀಂದ್ರಾ ಬ್ಯಾಂಕ್ಗಳಲ್ಲಿ 20 ಲಕ್ಷ ರೂ. ದಂಡ ಹಾಕಲಾಗಿದೆ.
ದಂಡಗಳು ಆಯಾ ಬ್ಯಾಂಕ್ ಗಳ ನಿಯಮಗಳ ಉಲ್ಲಂಘನೆಯ ಪ್ರಮಾಣವನ್ನು ಅವಲಂಬಿಸಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ.