ಆರ್ಥಿಕ ಸಂಕಷ್ಟದಲ್ಲಿರುವ ಟೆಲಿಕಾಂ ಕ್ಷೇತ್ರಕ್ಕೆ ಕೇಂದ್ರ ಸರ್ಕಾರದಿಂದ ರಿಲೀಫ್

ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಬಹುದೊಡ್ಡ ಉಪಕ್ರಮಕ್ಕೆ ಮುಂದಾಗಿದೆ. ಇದರಂತೆ ದೂರಸಂಪರ್ಕ ಸೇವಾ ಸಂಸ್ಥೆಗಳಾದ ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ (ಸ್ಪೆಕ್ಟ್ರನ್) ಬಾಕಿ ಮೊತ್ತ ಪಾವತಿಗೆ ಎರಡು ವರ್ಷಗಳ ಕಾಲಾವಕಾಶ ನೀಡಿದೆ
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟ ಎದುರಿಸುತಿರುವ ಟೆಲಿಕಾಂ ವಲಯಕ್ಕೆ ನೆರವಾಗಲು ಕೇಂದ್ರ ಸರ್ಕಾರ ಬಹುದೊಡ್ಡ ಉಪಕ್ರಮಕ್ಕೆ ಮುಂದಾಗಿದೆ. ಇದರಂತೆ ದೂರಸಂಪರ್ಕ ಸೇವಾ ಸಂಸ್ಥೆಗಳಾದ ಭಾರ್ತಿ ಏರ್ ಟೆಲ್, ರಿಲಯನ್ಸ್ ಜಿಯೋ, ವೊಡಾಪೋನ್ ಐಡಿಯಾ ಸೇರಿ ಅನೇಕ ಸಂಸ್ಥೆಗಳು ಸರ್ಕಾರಕ್ಕೆ ಸಲ್ಲಿಸಬೇಕಾಗಿರುವ ತರಂಗಗುಚ್ಚ (ಸ್ಪೆಕ್ಟ್ರನ್) ಬಾಕಿ ಮೊತ್ತ ಪಾವತಿಗೆ ಎರಡು ವರ್ಷಗಳ ಕಾಲಾವಕಾಶ ನೀಡಿದೆ.

ಸೆಲ್ಯುಲಾರ್ ಆಪರೇಟರ್ಸ್ ಅಸೋಸಿಯೇಶನ್ ಆಫ್ ಇಂಡಿಯಾ (ಸಿಒಎಐ) ಡಿಜಿ ರಾಜನ್ ಮ್ಯಾಥ್ಯೂಸ್, ಮೊಬೈಲ್ ಕರೆ ಮತ್ತು ಡೇಟಾ ದರಗಳಲ್ಲಿ ಪ್ರಸ್ತಾವಿತ ಸುಂಕ ಹೆಚ್ಚಳದ ಒತ್ತಡವನ್ನು ಕಡಿಮೆ ಮಾಡಲು ಇದು ಭಾಗಶಃ ಸಹಾಯವಾಗಲಿದೆ ಎಂದಿದ್ದಾರೆ.

ಟೆಲಿಕಾಂ ಸಂಸ್ಥೆಗಳು ತರಂಗಗುಚ್ಚ ಬಾಕಿ ಮೊತ್ತ ೪೨ ಸಾವಿರ ಕೋಟಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕಿದೆ. ಇದಕ್ಕಾಗಿ ಕೇಂದ್ರವು ಎರಡು ವರ್ಷಗಳ ಕಾಲಾವಕಾಶ ಒದಗಿಸಿದೆ. ಆದರೆ ಅ.೨೪ರಂದು ಸುಪ್ರೀಂ ಕೋರ್ಟ್ ನೀಡಿದ್ದ ತಿರ್ಪಿನನ್ವಯ ಉದ್ಭವಿಸಿರುವ ೧.೪೭ ಲಕ್ಷ ಕೋಟಿ ರು.  ಹೊಂದಾಣಿಕೆ ಮಾಡಲಾಗದ ಒಟ್ಟು ಆದಾಯದಲ್ಲಿ ಯಾವ ರಿಯಾಯಿತಿ ಇಲ್ಲ. ಈ ವಿಚಾರದಲ್ಲಿ ರಿಯಾಯಿತಿ ನೀಡಲು ಸುಪ್ರೀಂ ಕೋರ್ಟ್ ಗೆ ಮಾತ್ರವೇ ಅವಕಾಶವಿದೆ.ದೂರಸಂಪರ್ಕ ಕಂಪನಿಗಳು ಇದಾಗಲೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಿಸಿದೆ.ಒಂದು ವೇಳೆ ಕೋರ್ಟ್ ಗೆ ಸಮಸ್ಯೆಯ ಮನವರಿಕೆಯಾದರೆ ನೆರವು ದೊರೆಯುವ ಸಂಭವವಿದೆ.

ದೂರಸಂಪರ್ಕ ಸೇವಾ ಸಂಸ್ಥೆಗಳು ಆರ್ಥಿಕ ಸಂಕಷ್ಟದಲ್ಲಿದ್ದ ಕಾರಣ ಈ ನೆರವು ಒದಗಿಸಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com