ಆಗಸ್ಟ್ ನಲ್ಲಿ ಚಿಲ್ಲರೆ ಹಣದುಬ್ಬರ ಶೇ.3.21ಕ್ಕೆ ಏರಿಕೆ, ಇದು 10 ತಿಂಗಳಲ್ಲೇ ಗರಿಷ್ಠ

ಮಾಂಸ ಮತ್ತು ಮೀನು ಸೇರಿದಂತೆ ಹಲವು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ 8 ತಿಂಗಳಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇ.3.21ಕ್ಕೆ ಏರಿಕೆಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ನವದೆಹಲಿ: ಮಾಂಸ ಮತ್ತು ಮೀನು ಸೇರಿದಂತೆ ಹಲವು ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದಾಗಿ ಕಳೆದ 8 ತಿಂಗಳಿಂದ ಏರು ಗತಿಯಲ್ಲಿ ಸಾಗುತ್ತಿರುವ ಚಿಲ್ಲರೆ ಹಣದುಬ್ಬರ ಆಗಸ್ಟ್ ತಿಂಗಳಲ್ಲಿ ಶೇ.3.21ಕ್ಕೆ ಏರಿಕೆಯಾಗಿದೆ. ಇದು ಕಳೆದ 10 ತಿಂಗಳಲ್ಲೇ ಅತಿ ಗರಿಷ್ಠ ಎಂಬುದು ಸರ್ಕಾರಿ ಅಂಕಿ ಅಂಶಗಳಿಂದ ತಿಳಿದುಬಂದಿದೆ.

ಆದಾಗ್ಯೂ ಚಿಲ್ಲರೆ ಹಣದುಬ್ಬರ ಏರಿಕೆ ಆರ್ ಬಿಐ ಟಾರ್ಗೆಟ್ ರೇಂಜ್ ನಲ್ಲೇ ಇದ್ದು, ಮತ್ತೊಂದು ದರ ಕಡಿತದ ವಿಶ್ವಾಸ ಉಳಿಸಿಕೊಂಡಿದೆ.

ಕಳೆದ ಜನವರಿ ಶೇ. 1.97ರಷ್ಟು ಇದ್ದ ಚಿಲ್ಲರೆ ಹಣದುಬ್ಬರ ಏರುಗತಿಯಲ್ಲಿ ಸಾಗುತ್ತಿದ್ದು, ಮೇ ತಿಂಗಳಲ್ಲಿ ಶೇ.3.05ರಷ್ಟು ಇತ್ತು. ಇದೀಗ ಶೇ.3.21ಕ್ಕೆ ಏರಿಕೆಯಾಗುವ ಮೂಲಕ ಕಳೆದ 10 ತಿಂಗಳಲ್ಲಿನ ಗರಿಷ್ಠ ಮಟ್ಟ ತಲುಪಿದೆ.

ಗ್ರಾಹಕ ದರ ಸೂಚ್ಯಂಕ(ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಏಪ್ರಿಲ್‌ನಲ್ಲಿ ಶೇ.2.99ರಷ್ಟಿತ್ತು. 2018ರ ಮೇನಲ್ಲಿ ಶೇ.4.87ರಷ್ಟಿತ್ತು. 2018ರ ಅಕ್ಟೋಬರ್‌ನಲ್ಲಿ ಶೇ.3.38ಕ್ಕೆ ಇಳಿದಿತ್ತು. ಇದಕ್ಕೆ ಹೋಲಿಸಿದರೆ, ಪ್ರಸಕ್ತ ಸಂದರ್ಭದಲ್ಲಿ ಕಡಿಮೆಯಾಗಿದೆ. 

ಚಿಲ್ಲರೆ ಹಣದುಬ್ಬರವು ಆರ್ಥಿಕತೆ ಅಂಶಗಳಲ್ಲಿ ಪ್ರಮುಖವಾದುದು. ಇದರ ಮೇಲೆ ಆರ್‌ಬಿಐ ಸತತ ನಿಗಾ ಇಟ್ಟಿರುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com