'ಪಾರ್ಲೆ' ಉದ್ಯೋಗಿಗಳಿಗೆ ಸಂಕಷ್ಟ: 10 ಸಾವಿರ ಉದ್ಯೋಗಿಗಳ ಕೆಲಸಕ್ಕೆ ಕುತ್ತು!

ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ.
ಪಾರ್ಲೆ ಜಿ
ಪಾರ್ಲೆ ಜಿ

ಬೆಂಗಳೂರು: ಏಳೆಂಟು ದಶಕಗಳ ಇತಿಹಾಸ ಹೊಂದಿರುವ ದೇಶದ ಅತ್ಯಂತ ದೊಡ್ಡ ಬಿಸ್ಕತ್ ತಯಾರಿಕಾ ಸಂಸ್ಥೆ ಪಾರ್ಲೆ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸುಮಾರು 10 ಸಾವಿರ ಉದ್ಯೋಗಿಗಳನ್ನು ಕೈಬಿಡುವ ಸಾಧ್ಯತೆಯಿದೆ.

ಸದ್ಯದ ಪರಿಸ್ಥಿತಿಯಲ್ಲಿ ಆಟೋ ಮೊಬೈಲ್ ಕ್ಷೇತ್ರದಲ್ಲಿ ದೊಡ್ಡ ಉದ್ಯೋಗ ನಷ್ಟ ಉಂಟಾಗಿರುವ ವರದಿಯ ಬೆನ್ನಲ್ಲೇ ಬೇಡಿಕೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಇದೀಗ ಪಾರ್ಲೆ ಬಿಸ್ಕತ್ ಸಂಸ್ಧೆ ತನ್ನ 10 ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಮುಂದಾಗಿದೆ ಎಂದು ಸುದ್ದಿ ಸಂಸ್ಧೆಯೊಂದು ವರದಿ ಮಾಡಿದೆ.

ಜಿಎಸ್ ಟಿ ಕಡಿತಗೊಳಿಸುವಂತೆ ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಒಂದು ವೇಳೆ ಸರ್ಕಾರದಿಂದ ನಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದೆ ಆದಲ್ಲಿ 8 ಸಾವಿರದಿಂದ 10 ಸಾವಿರ ಮಂದಿಯನ್ನು ಕೈಬಿಡದೆ ಅನ್ಯ ಉಪಾಯವಿಲ್ಲ ಎಂದು ಪಾರ್ಲೆ ಪ್ರಾಡಕ್ಟ್ಸ್ ಕೆಟಗರಿ ಹೆಡ್ ಮಾಯಾಂಕ್ ಶಾ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com