ಎಫ್ ಪಿಐ ಮೇಲಿನ ಸರ್ಚಾರ್ಜ್ ಹಿಂಪಡೆದ ಸರ್ಕಾರ, ಬ್ಯಾಂಕ್ ಗಳ ಪುನಶ್ಚೇತನಕ್ಕೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಘೋಷಣೆ

ದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್‌ ಪೋರ್ಟ್‌ಫೋಲಿಯೊ ಇನ್‌ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು....
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ನವದೆಹಲಿ: ದೇಶದ ಆರ್ಥಿಕತೆ ಸುಧಾರಣೆಗೆ ಕೆಲವೊಂದ ಕ್ರಮಗಳನ್ನು ತೆಗೆದುಕೊಂಡಿರುವ ಕೇಂದ್ರ ಸರ್ಕಾರ ಫಾರಿನ್‌ ಪೋರ್ಟ್‌ಫೋಲಿಯೊ ಇನ್‌ವೆಸ್ಟರ್ಸ್ ಮೇಲೆ ವಿಧಿಸಲಾಗಿದ್ದ ಹೆಚ್ಚುವರಿ ಶುಲ್ಕವನ್ನು ರದ್ದುಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್ ಅವರು, ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಭಾರತದ ಆರ್ಥಿಕ ಪ್ರಗತಿ ಗಣನೀಯವಾಗಿ ಏರಿಕೆಯಲ್ಲಿದೆ ಎಂದು ಹೇಳಿದರು.

ದೀರ್ಘಾವಧಿ/ಅಲ್ಪಾವಧಿ ಬಂಡವಾಳ ಲಾಭದ ಮೇಲಿನ ಸುಂಕಗಳನ್ನು ತೆಗೆಯುವುದು, ಸ್ಟಾರ್ಟಪ್‌ಗಳ ಮೇಲಿನ ಏಜೆಂಲ್‌ ಟ್ಯಾಕ್ಸ್‌ ರದ್ದು, ಕಾರ್ಪೊರೆಟ್‌ ಸಾಮಾಜಿಕ ಜವಾಬ್ದಾರಿ ಕುರಿತ ಪ್ರಕರಣಗಳನ್ನು ಕ್ರಿಮಿನಲ್‌ ಪ್ರಕರಣಗಳಾಗಿ ಪರಿಗಣಿಸದೇ ಇರುವುದು ಸೇರಿದಂತೆ ಹಲವು ಪ್ರಮುಖ ಕ್ರಮಗಳನ್ನು ಕೈಗೊಂಡಿರುವುದಾಗಿ ಸಚಿವರು ತಿಳಿಸಿದರು. ಅಲ್ಲದೆ ಸಣ್ಣ ಅತಿ ಸಣ್ಣ ಕೈಗಾರಿಕೆಗಳಿಗೆ ಬಾಕಿ ಇರುವ ಜಿಎಸ್‌ಟಿ ರಿಟರ್ನ್ಸ್ ಅನ್ನು 30 ದಿನಗಳೊಳಗೆ ಪಾವತಿಸುವುದಾಗಿ ಹೇಳಿದ್ದಾರೆ.

ಆಟೋಮೊಬೈಲ್‌ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕ್ರಮ ಕೈಗೊಳ್ಳಲಾಗಿದೆ. ಕಾರ್ಪೊರೇಟ್‌ ಸಾಮಾಜಿಕ ಬದ್ಧತೆ ಉಲ್ಲಂಘನೆ ಮಾಡುವುದು ಯಾವುದೇ ರೀತಿಯಲ್ಲೂ ಅಪರಾಧ ಅಲ್ಲ ಎಂದು ಹಣಕಾಸು ಸಚಿವರು ಸ್ಪಷ್ಟಪಡಿಸಿದರು. 

ಭಾರತೀಯ ರಿಸರ್ವ್‌ ಬ್ಯಾಂಕ್‌ ಇತ್ತೀಚೆಗೆ ರೆಪೊ ದರ ಕಡಿತಗೊಳಿಸಿದೆ. ಹೀಗಾಗಿ ಬ್ಯಾಂಕ್‌ಗಳು ಗ್ರಾಹಕರಿಗೆ ಬಡ್ಡಿದರ ಕಡಿತ ಮಾಡಲು ನಿರ್ಧರಿಸಿವೆ, ಇದರಿಂದ ಗೃಹ ಮತ್ತು ವಾಹನ ಸಾಲ ಬಡ್ಡಿದರ ಕಡಿಮೆಯಾಗಲಿದೆ ಎಂದು ನಿರ್ಮಲಾ ಸೀತಾರಾಮನ್‌ ತಿಳಿಸಿದರು. 

ತೆರಿಗೆ ಪಾವತಿಯ ಪ್ರಕ್ರಿಯೆಗಳನ್ನು ಸರಳಗೊಳಿಸಲಾಗುವುದು, ಸುಧಾರಣೆ ನಮ್ಮ ಪ್ರಮುಖ ಅಜೆಂಡಾ ಆಗಿದೆ. ಆರ್ಥಿಕತೆ ಕುಸಿತದ ಭೀತಿಯನ್ನು ಹೋಗಲಾಡಿಸಲಾಗುವುದು ಎಂದು ಅವರು ಹೇಳಿದರು.

ಇದೇ ವೇಳೆ ಬ್ಯಾಂಕ್‌ಗಳ ಪುನಶ್ಚೇತನಕ್ಕಾಗಿ 70 ಸಾವಿರ ಕೋಟಿ ರೂ. ಪ್ಯಾಕೇಜ್‌ ಘೋಷಿಸಲಾಗುವುದು ಎಂದು ಸಚಿವರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com