ವಾಯುಯಾನ ಕ್ಷೇತ್ರಕ್ಕೆ ಹೈ.ಕರ್ನಾಟಕ ಮುಕ್ತ: ಕಲಬುರ್ಗಿ ವಿಮಾನ ನಿಲ್ದಾಣ ಅಭಿವೃದ್ದಿಗಾಗಿ ಎಎಐ ಜೊತೆ ರಾಜ್ಯ ಸರ್ಕಾರ ಒಪ್ಪಂದ

 ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ  ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ, ತ್ತು ನಿರ್ವಹಣೆಗಾಗಿ ಕರ್ನಾಟಕ ಸರ್ಕಾರ ಶನಿವಾರ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಿದೆ. ಇದರೊಡನೆ  ಬೆಂಗಳೂರು ಮತ್ತು ಇಡೀ ದೇಶಕ್ಕೆ ವಾಯುಯಾನ ಸಂಪರ್ಕದ ದೃಷ್ಟಿಯಿಂದ ಹೈದರಾಬಾದ್-ಕರ್ನಾಟಕ ಪ್ರದೇಶದ ಬಾಗಿಲು ತೆರೆದಂತಾಗಿದೆ.

ಹಿಂದುಳಿದ  ಹೈದರಾಬಾದ್-ಕರ್ನಾಟಕ ಪ್ರದೇಶದ ಒಟ್ಟಾರೆ ಆರ್ಥಿಕ ಅಭಿವೃದ್ಧಿಗೆ ಇದರಿಂದ ಅನುಕೂಲವಾಗಲಿದೆ. ಹೈದರಾಬಾದ್-ಕರ್ನಾಟಕ ಭಾಗಕ್ಕೆ ಸಂವಿಧಾನದ 371 ಜೆ ಅಡಿಯಲ್ಲಿ ವಿಶೇಷ ಸ್ಥಾನಮಾನವನ್ನು ನೀಡಲಾಗಿದೆ.

ಕರ್ನಾಟಕ ಸರ್ಕಾರದ ಪರವಾಗಿ ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ (ಕೆಎಸ್‌ಐಐಡಿಸಿ) ಮತ್ತು ಭಾರತ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ನಡುವೆ ಕಲಬುರ್ಗಿ ಸಂಸದ  ಉಮೇಶ್ ಜಾಧವ್, ಮುಖ್ಯ ಕಾರ್ಯದರ್ಶಿ ಟಿ ಎಂ ವಿಜಯ್ ಭಾಸ್ಕರ್ ಉಪಸ್ಥಿತಿಯಲ್ಲಿ ಒಪ್ಪಂದಕ್ಕೆ ಸಹಿ ಹಾಕಲಾಯಿತು.

ಮಾರ್ಚ್ 27, 2007 ರಂದು ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿಗೆ ರಾಜ್ಯ ಸರ್ಕಾರ ತನ್ನ ಆಡಳಿತಾತ್ಮಕ ಅನುಮೋದನೆಯನ್ನು ನೀಡಿತ್ತು. ಕಲಬುರ್ಗಿ ವಿಮಾನ ನಿಲ್ದಾಣದ ಅಭಿವೃದ್ಧಿ ಮತ್ತು ನಿರ್ಮಾಣಕ್ಕಾಗಿ ಈವರೆಗೆ ಒಟ್ಟು 230 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. 742 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸುಮಾರು 22 ಕೋಟಿ ರೂ. ಮತ್ತು ನಿರ್ಮಾಣ ಕಾರ್ಯಗಳಿಗಾಗಿ 208 ಕೋಟಿ ರೂ. ಇದರಲ್ಲಿ ಸೇರಿದೆ.

ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳನ್ನು ಲೋಕೋಪಯೋಗಿ ಇಲಾಖೆಯು ತಾಂತ್ರಿಕ ಮಾರ್ಗದರ್ಶನದೊಂದಿಗೆM / s RITESIndia Pvt Ltd. ನಡೆದಲಿದೆ.ಈ ಕಾಮಗಾರಿಗಳು  ಪೂರ್ಣಗೊಳ್ಳುವ ಹಂತದಲ್ಲಿದ್ದು, ಆಗಸ್ಟ್ 2018 ರಲ್ಲಿ ವಿಮಾನಗಳ ಮೊದಲ ಟ್ರಯಲ್ ರನ್ ನಡೆಸಲಾಗಿದೆ. ಪ್ರಾದೇಶಿಕ ಸಂಪರ್ಕ ಯೋಜನೆ-ಉಡಾನ್ (ಆರ್‌ಸಿಎಸ್ -300) ಅಡಿಯಲ್ಲಿ ಮೂರನೇ ಸುತ್ತಿನ ಬಿಡ್ಡಿಂಗ್ / ಆಯ್ಕೆಯ ಸಮಯದಲ್ಲಿ ಕಲಬುರ್ಗಿ ವಿಮಾನ ನಿಲ್ದಾಣವು ಕಾರ್ಯಾಚರಣೆಗೆ ಅರ್ಹತೆ ಪಡೆದಿದೆ ಎಂದು ಪ್ರಕಟಣೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com