ಕೆನರಾ ಬ್ಯಾಂಕ್‌ ಜೊತೆ ಸಿಂಡಿಕೇಟ್‌ ಬ್ಯಾಂಕ್, ಕಾರ್ಪೊರೇಷನ್‌ ಬ್ಯಾಂಕ್‌ ಜೊತೆ ಎರಡು ಬ್ಯಾಂಕ್ ವಿಲೀನ

ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿಕೇಟ್‌ ಬ್ಯಾಂಕ್ ಹಾಗೂ ಕಾರ್ಪೊರೇಷನ್‌ ಬ್ಯಾಂಕ್‌ನೊಂದಿಗೆ ಯೂನಿಯನ್‌ ಬ್ಯಾಂಕ್‌ ಮತ್ತು ಆಂಧ್ರಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ
ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್

ದೆಹಲಿ: ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿಕೇಟ್‌ ಬ್ಯಾಂಕ್ ಹಾಗೂ ಕಾರ್ಪೊರೇಷನ್‌ ಬ್ಯಾಂಕ್‌ನೊಂದಿಗೆ ಯೂನಿಯನ್‌ ಬ್ಯಾಂಕ್‌ ಮತ್ತು ಆಂಧ್ರಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
  
ಹಾಗೆಯೇ ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ ನೊಂದಿಗೆ ಓರಿಯಂಟಲ್ ಬ್ಯಾಂಕ್‌ ಆಫ್‌ ಕಾಮರ್ಸ್‌ ಮತ್ತು ಯುನೈಟೆಡ್‌ ಬ್ಯಾಂಕ್‌, ಅಲಹಾಬಾದ್‌ ಬ್ಯಾಂಕ್‌ನೊಂದಿಗೆ ಇಂಡಿಯನ್‌ ಬ್ಯಾಂಕ್‌, ವಿಜಯಾ ಬ್ಯಾಂಕ್‌ನೊಂದಿಗೆ ಬ್ಯಾಂಕ್‌ ಆಫ್‌ ಬರೋಡ, ದೇನಾ ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗುವುದು ಎಂದು ತಿಳಿಸಿದರು. 

ವಿಲೀನಗೊಂಡ ನಂತರ ಕೆನರಾ ಬ್ಯಾಂಕ್‌-ಸಿಂಡಿಕೇಟ್ ಬ್ಯಾಂಕ್‌ ಸಾರ್ವಜನಿಕ ವಲಯದ ನಾಲ್ಕನೇ ಅತಿದೊಡ್ಡ ಬ್ಯಾಂಕ್‌ ಎನಿಸಲಿದೆ. ದೇಶದಲ್ಲಿ ಸದ್ಯ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಸಂಖ್ಯೆ 27ರಿಂದ 12ಕ್ಕೆ ಇಳಿದಿದೆ. ವಿಲೀನದಿಂದ ಕಾರ್ಯಕ್ಷಮತೆ ಹೆಚ್ಚಾಗಲಿದೆ ಎಂದು ಅವರು ಹೇಳಿದ್ದಾರೆ.  
  
ವಸೂಲಾಗದ ಸಾಲ ಪ್ರಮಾಣ 7.90 ಲಕ್ಷ ಕೋಟಿ ರೂ.ಗೆ ಇಳಿದಿದ್ದು, ಬ್ಯಾಂಕ್‌ಗಳ ಆರ್ಥಿಕ ಸ್ಥಿತಿ ಸುಧಾರಿಸಿದೆ. ಹೊಸ ಪೀಳಿಗೆಯ ತಂತ್ರಜ್ಞಾನ ಆಧರಿತ ಬ್ಯಾಂಕಿಂಗ್ ವ್ಯವಸ್ಥೆ ರೂಪಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com