ತೈಲೋತ್ಪನ್ನಗಳ ದರದಲ್ಲಿ ಅಲ್ಪ ಪ್ರಮಾಣದ ಇಳಿಕೆ; ಇಂದಿನ ಪೆಟ್ರೋಲ್, ಡೀಸೆಲ್ ದರ ಪಟ್ಟಿ ಇಲ್ಲಿದೆ!

ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಮುಂಬೈ: ತೈಲೋತ್ಪನ್ನಗಳ ದರ ಶುಕ್ರವಾರ ಮತ್ತೆ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ.
ದೈನಂದಿನ ಬೆಲೆ ಬದಲಾವಣೆ ಪ್ರಕ್ರಿಯೆಯಲ್ಲಿ ಶುಕ್ರವಾರವೂ ತೈಲೋತ್ಪನ್ನಗಳ ದರ ಬದಲಾವಣೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 15 ಪೈಸೆ ಮತ್ತು ಡೀಸೆಲ್ ದರದಲ್ಲಿ 10 ಪೈಸೆ ಇಳಿಕೆಯಾಗಿದೆ. ಆ ಮೂಲಕ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೆಟ್ರೋಲ್‌ ದರ ಲೀಟರ್ ಗೆ ರೂ  73.27ಗೆ ಏರಿಕೆಯಾಗಿದ್ದು. ಡೀಸೆಲ್‌ ದರ 67.87 ರೂ.ಗೆ ಇಳಿಕೆಯಾಗಿದೆ.
ಇನ್ನು ರಾಷ್ಟ್ರ ರಾಜಧಾನಿ ದೆಹಲಿ ಲೀಟರ್‌ ಪೆಟ್ರೋಲ್‌ ದರ  70.94  ರೂ. ಮತ್ತು ಡೀಸೆಲ್‌ ದರ 65.71 ರೂಗೆ ಏರಿಕೆಯಾಗಿದೆ. 
ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಪೆಟ್ರೋಲ್‌ ದರ 73.64 ರೂ. ಮತ್ತು ಡೀಸೆಲ್‌ ದರ 69.41 ರೂಗೆ ಏರಿಕೆಯಾಗಿದೆ. ಪಶ್ಚಿಮ ಬಂಗಾಳ ರಾಜಧಾನಿ ಕೋಲ್ಕತಾದಲ್ಲಿ ಪೆಟ್ರೋಲ್‌ ದರ 73.04 ರೂ. ಮತ್ತು ಡೀಸೆಲ್‌ ದರ 67.49 ರೂ. ಇದೆ. ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್‌ ದರ 76.57  ರೂ. ಮತ್ತು ಡೀಸೆಲ್‌ ದರ 68.81 ರೂ. ಇದೆ. 
ಡಾಲರ್ ಎದುರು ರೂಪಾಯಿ ಮೌಲ್ಯ ಅಲ್ಪ ಪ್ರಮಾಣದಲ್ಲಿ ಕುಸಿದಿರುವುದೇ ತೈಲ ದರ ಏರಿಕೆಗೆ ಕಾರಣ ಎನ್ನಲಾಗಿದೆ. ಇನ್ನು ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರಲ್ ಗೆ ರೂ. 3854ಕ್ಕೆ ತಲುಪಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com