ಬ್ಯಾಂಕ್ ಆಫ್ ಬರೋಡಾ ಜೊತೆ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ವಿಲೀನಕ್ಕೆ ಕೇಂದ್ರ ಸಂಪುಟ ಅಸ್ತು

ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಬ್ಯಾಂಕ್ ಆಫ್ ಬರೋಡಾ
ಬ್ಯಾಂಕ್ ಆಫ್ ಬರೋಡಾ
ನವದೆಹಲಿ: ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾಗಳ ವಿಲೀನಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಈ ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳ ವಿಲೀನದ ನಂತರ, ಆಸ್ತಿಗಳ ಆಧಾರದ ಮೇಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಎಚ್ ಡಿಎಫ್ ಸಿ ಬ್ಯಾಂಕ್ ನಂತರ ಭಾರತದಲ್ಲಿ ಮೂರನೇ ದೊಡ್ಡ ಬ್ಯಾಂಕ್ ಆಗಿ ರೂಪುಗೊಳ್ಳುತ್ತದೆ.
 ಈ ವಿಲೀನ ಬಳಿಕ ಬ್ಯಾಂಕ್ ಆಫ್ ಬರೋಡಾಗೆ ಹೆಚ್ಚಿನ ಸಾಲ ನೀಡುವ ಸಾಮರ್ಥ್ಯವನ್ನು ನೀಡಲಿದೆ.ಬ್ಯಾಂಕ್ ಆಫ್ ಬರೋಡಾ ಇದಾಗಲೇ  ಜಾಗತಿಕ ಸ್ಪರ್ಧೆಯಲ್ಲಿ ತನ್ನದೇ ಆದ ಮಹತ್ವದ ಪಾತ್ರ ನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಒಮ್ಮೆ ವಿಲೀನವಾದ ಬಳಿಕ ದೇನಾ ಬ್ಯಾಂಕ್, ವಿಜಯಾ ಬ್ಯಾಂಕ್ ನ ಎಲ್ಲಾ ಉದ್ಯೋಗಿಗಳು ಬ್ಯಾಂಕ್ ಆಫ್ ಬರೋಡಾ ಅಡಿಗೆ ಬರಲಿದ್ದಾರೆ. ಆದರೆ ಇದರಿಂದ ಯಾರೊಬ್ಬರಿಗೆ ತಮ್ಮ ಸೇವಾವಧಿ ಹಾಗೂ ಕೆಲಸದ ವಿಚಾರದಲ್ಲಿ ಯಾವ ಬದಲಾವಣೆ ಆಗುವುದಿಲ್ಲ ಎಂದು ಪ್ರಸಾದ್ ಭರವಸೆ ನೀಡಿದ್ದಾರೆ. ಅಲ್ಲದೆ ವಿಲೀನದ ಬಳಿಕ ಬ್ಯಾಂಕ್ ಆಫ್ ಬರೋಡ ಜಾಗತಿಕವಾಗಿ ಸ್ಪರ್ಧಾತ್ಮಕ ಹಣಕಾಸು ಸಂಸ್ಥೆಯಾಗಿ ರೂಪುಗೊಳ್ಳೂತ್ತದೆ ಎಂದೂ ಅವರು ಹೇಳಿದ್ದಾರೆ.
ಮೂರು ಬ್ಯಾಂಕ್ ಗಳ ವಿಲೀನದ ಕುರಿತಂತೆ ಕೇಂದ್ರ ಸರ್ಕಾರ ಕಳೆದ ಸೆಪ್ಟೆಂಬರ್ ನಲ್ಲಿ ಪ್ರಕಟಣೆ ಹೊರಡಿಸಿತ್ತು.ಬ್ಯಾಂಕ್ ಕಾರ್ಯನಿರ್ವಹಣೆ, ಆಸ್ತಿ ಗಳ ವಿಚಾರವಾಗಿ ಏಕೀಕರಣವನ್ನು ಉತ್ತೇಜಿಸುವ ಸರ್ಕಾರದ ಕಾರ್ಯತಂತ್ರದ ಒಂದು ಭಾಗವಾಗಿ ಈ ವಿಲೀನ ಪ್ರಕ್ರಿಯೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com