ಬ್ಯಾಂಕ್ ನಿಯಮಾವಳಿ ಉಲ್ಲಂಘನೆ ಸಾಬೀತು: ಐಸಿಐಸಿಐನಿಂದ ಚಂದಾ ಕೊಚ್ಚಾರ್ ಔಟ್

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಅವರು ಬ್ಯಾಂಕ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ಸಾಬೀತಾಗಿದ್ದು....
ಚಂದಾ ಕೊಚ್ಚಾರ್
ಚಂದಾ ಕೊಚ್ಚಾರ್
ನವದೆಹಲಿ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಅವರು ಬ್ಯಾಂಕ್ ನಿಯಮಾವಳಿಗಳನ್ನು ಉಲ್ಲಂಘಿಸಿದ ಆರೋಪ ಸಾಬೀತಾಗಿದ್ದು, ಅವರನ್ನು ಐಸಿಐಸಿಐ ಬ್ಯಾಂಕ್ ಸೇವೆಯಿಂದಲೇ ವಜಾಗೊಳಿಸಲಾಗಿದೆ.
ಚಂದಾ ಕೊಚ್ಚಾರ್ ಅವರ ವಿರುದ್ಧದ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಂತ್ರ ತನಿಖೆ ನಡೆಸಿದ ನಿವೃತ್ತ ನ್ಯಾಯಮೂರ್ತಿ ಬಿಎನ್ ಶ್ರೀಕೃಷ್ಣ ಅವರು ಬುಧವಾರ ವರದಿ ಸಲ್ಲಿಸಿದ್ದು, ಬ್ಯಾಂಕ್ ನಿಯಮಾವಳಿ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ.
ತನಿಖಾ ವರದಿಯನ್ನು ಆಧರಿಸಿ ಬ್ಯಾಂಕ್ ಮಂಡಳಿ, ಬ್ಯಾಂಕ್ ಆಂತರಿಕ ನಿಯಮಗಳ ಅಡಿ ಚಂದಾ ಕೊಚ್ಚರ್ ಅವರನ್ನು ಐಸಿಐಸಿಐಯಿಂದಲೇ ಹೊರ ಹಾಕಲ ನಿರ್ಧರಿಸಿದೆ. ಅಲ್ಲದೆ ಅವರ ವೇತನ, ಬೋನಸ್, ಮೆಡಿಕಲ್ ಸೌಲಭ್ಯಗಳು ಮತ್ತು ಷೇರು ಪಾಲುದಾರಿಕೆಯನ್ನು ಹಿಂಪಡೆಯಲು ಮುಂದಾಗಿದೆ.
ಚಂದಾ ಕೊಚ್ಚಾರ್ ಅಧಿಕಾರದಲ್ಲಿ ಇದ್ದಾಗಲೆ ಐಸಿಐಸಿಐ ಬ್ಯಾಂಕ್ ಮೂಲಕ ಅವ್ಯವಹಾರ ನಡೆದಿದೆ ಎಂದು ಕಳೆದ ಮಾರ್ಚ್ ನಲ್ಲಿ ಮೊದಲ ಬಾರಿಗೆ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಚಂದಾ ಕೊಚ್ಚರ್ ಕಳೆದ ಅಕ್ಟೋಬರ್‌ನಲ್ಲಿ ಸಿಇಒ ಹುದ್ದೆಯಿಂದ ಕೆಳಗಿಳಿದಿದ್ದರು.
ವಿಡಿಯೋಕಾನ್ ಸಂಸ್ಥೆಗೆ ನೀಡಲಾಗಿದ್ದ 3,250 ಕೋಟಿ ರೂ. ಸಾಲದ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿ ಬಂದಿದ್ದು, ಈ ಸಂಬಂಧ ಸಿಬಿಐ ಚಂದಾ ಕೊಚ್ಚಾರ್, ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ಚೇರ್ಮನ್ ವೇಣುಗೋಪಾಲ್ ಧೂತ್ ವಿರುದ್ಧ ಎಫ್ಐಆರ್ ದಾಖಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com