ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ ದರ ಶೇ.5ಕ್ಕೆ ಇಳಿಸಿದ ಜಿಎಸ್ ಟಿ ಮಂಡಳಿ

ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ತಗ್ಗಿಸಲು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ; ವಿದ್ಯುತ್ ಚಾಲಿತ ವಾಹನಗಳ ಮೇಲಿನ ತೆರಿಗೆ ದರವನ್ನು ಶೇಕಡಾ 12ರಿಂದ ಶೇಕಡಾ 5ಕ್ಕೆ ತಗ್ಗಿಸಲು ಸರಕು ಮತ್ತು ಸೇವಾ ತೆರಿಗೆ ಮಂಡಳಿ ಶನಿವಾರ ನಿರ್ಧರಿಸಿದೆ. ನೂತನ ತೆರಿಗೆ ದರ ಆಗಸ್ಟ್ 1ರಿಂದ ಜಾರಿಗೆ ಬರಲಿದೆ.
ವಿದ್ಯುತ್ ಚಾಲಿತ ಚಾರ್ಜರ್ ಗಳ ಮೇಲಿನ  ಜಿಎಸ್ಟಿ ದರವನ್ನು ಸಹ ಶೇಕಡಾ 18ರಿಂದ ಶೇಕಡಾ 5ಕ್ಕೆ ತಗ್ಗಿಸಲು ಮಂಡಳಿ ನಿರ್ಧರಿಸಿದೆ. ಇಂದು ದೆಹಲಿಯಲ್ಲಿ ನಡೆದ 36ನೇ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. 
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆಯಲ್ಲಿ ವಿಡಿಯೊ ಕಾನ್ಫರೆನ್ಸ್ ನಡೆಯಿತು. ಸ್ಥಳೀಯ ಅಧಿಕಾರಿಗಳಿಂದ ಎಲೆಕ್ಟ್ರಿಕ್ ಬಸ್ಸುಗಳನ್ನು ಖರೀದಿಸುವವರಿಗೆ ಜಿಎಸ್ ಟಿ ವಿನಾಯಿತಿಯನ್ನು ಕೂಡ ಮಂಡಳಿ ಒಪ್ಪಿಗೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com