
ಸಂಗ್ರಹ ಚಿತ್ರ
Source : PTI
ನವದೆಹಲಿ: ನಿರೀಕ್ಷೆಯಂತೆಯೇ ಲೋಕಸಭಾ ಚುನಾವಣೆ ಬಳಿಕ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆ ಕಂಡಿವೆ.
ಲೋಕಸಭಾ ಚುನಾವಣೆ ಮುಕ್ತಾಯದ ಬೆೃನ್ನಲ್ಲೇ ಇಂಧನ ದರಗಳು ಗಗನದತ್ತ ಮುಖ ಮಾಡಿದ್ದು, ಕಳೆದ ಮೇ 20ರಿಂದಲೂ ಇಂಧನ ದರಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಕಳೆದ 9 ದಿನಗಳ ಅವಧಿಯಲ್ಲಿ ಪ್ರತೀ ಲೀಟರ್ ಪೆಟ್ರೋಲ್ 83 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 73 ಪೈಸೆ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.
ಕಳೆದ ಏಪ್ರಿಲ್ ತಿಂಗಳಿನಿಂದಲೇ ಅಂತಾರಾಷ್ಟ್ರೀಯ ಇಂಧನ ಮಾರುಕಟ್ಟೆಯಲ್ಲಿ ಇಂಧನ ದರ ಏರಿಕೆಯಾಗಿತ್ತಾದರೂ, ಭಾರತದಲ್ಲಿ ಚುನಾವಣೆ ಇದ್ದಿದ್ದರಿಂದ ಇಂಧನ ಸಂಸ್ಥೆಗಳು ದರ ಏರಿಕೆ ಮಾಡಿರಲಿಲ್ಲ. ಹೀಗಾಗಿ ಲೋಕಸಭಾ ಚುನಾವಣೆ ಮತದಾನ ಮುಕ್ತಾಯದ ಬೆನ್ನಲ್ಲೇ ಪೆಟ್ರೋಲಿಯಂ ಸಂಸ್ಥೆಗಳು ಕ್ರಮೇಣ ದರ ಏರಿಕೆ ಮಾಡುತ್ತಿವೆ. ಮೇ14ರಿಂದಲೂ ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ದರ ಏರಿಕೆಯಾಗುತ್ತಾ ಬಂದಿದೆ. ಮಂಗಳವಾರವೂ ಸಹ ಇಂಧನ ದರ ಏರಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ 11 ಪೈಸೆ ಮತ್ತು ಪ್ರತೀ ಲೀಟರ್ ಡೀಸೆಲ್ ದರದಲ್ಲಿ 05 ಪೈಸೆ ಹೆಚ್ಚಳವಾಗಿದೆ ಎಂದು ತಿಳಿದುಬಂದಿದೆ.
Stay up to date on all the latest ವಾಣಿಜ್ಯ news