ದೇಶದ ರೈತರು, ಸಣ್ಣ ಉದ್ಯಮಕ್ಕೆ ತೊಂದರೆ ಹಿನ್ನಲೆ ಮುಕ್ತ ವ್ಯಾಪಾರ ಒಪ್ಪಂದ ತಿರಸ್ಕರಿಸಿದ ಭಾರತ

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ಬ್ಯಾಂಕಾಕ್: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದದಿಂದ ಭಾರತದ ತಯಾರಿಕಾ ವಲಯ ಮತ್ತು ಹೈನುಗಾರಿಕೆಗೆ ಧಕ್ಕೆಯಾಗಲಿದ್ದು ಈ ಹಿನ್ನೆಲೆಯಲ್ಲಿ ವಿಪಕ್ಷಗಳು ಮತ್ತು ರೈತರು ಪ್ರತಿಭಟನೆ ನಡೆಸಿದ್ದವು. ಸದ್ಯ ಈ ಒಪ್ಪಂದವನ್ನು ಭಾರತ ತಿರಸ್ಕರಿಸಿದೆ. 

ಸುಂಕ ರಹಿತ ವ್ಯಾಪರಕ್ಕೆ ಸದಸ್ಯ ರಾಷ್ಟ್ರಗಳಿಗೆ ಅವಕಾಶ ಕೊಡುವುದರಿಂದ ಇದು ನಮ್ಮ ಆರ್ಥಿಕತೆಯನ್ನು ಅಸ್ಥಿರಗೊಳಿಸುತ್ತದೆ. ಹೀಗಾಗಿ ಕೆಲವು ಸರಕುಗಳ ಮೇಲೆ ಸುಂಕ ಜಾರಿಯಲ್ಲಿರಲು ಅವಕಾಶ ನೀಡಬೇಕು ಎಂದು ಭಾರತ ಪಟ್ಟು ಹಿಡಿದಿತ್ತು. ಆದರೆ ಇದಕ್ಕೆ ಉಳಿದ ರಾಷ್ಟ್ರಗಳು ಸಹಮತ ಸೂಚಿಸದೆ ಇದ್ದಿದ್ದರಿಂದ ಈ ಒಪ್ಪಂದವನ್ನು ತಿರಸ್ಕರಿಸಲಾಗಿದೆ ಎಂದು ಭಾರತದ ವಿದೇಶಾಂಗ ಸಚಿವಾಲಯವು ತಿಳಿಸಿದೆ. 

ವಿಯೆಟ್ನಾಂನಲ್ಲಿ 2020ರ ಫೆಬ್ರವರಿಯಲ್ಲಿ ನಡೆಯಲಿರುವ ಆರ್‌ಸಿಇಪಿ ಶೃಂಗಸಭೆಯಲ್ಲಿ ಭಾರತವನ್ನು ಹೊರತುಪಡಿಸಿ ಉಳಿದ 15 ರಾಷ್ಟ್ರಗಳು ಈ ಒಪ್ಪಂದಕ್ಕೆ ಸಹಿ ಹಾಕಲಿವೆ. 

ಈ ಒಪ್ಪಂದಕ್ಕೆ ಸಹಿ ಹಾಕಿದರೆ ಚೀನಾದಿಂದ ಅತ್ಯಂತ ಕಡಿಮೆ ಬೆಲೆಯಲ್ಲಿ ಸರಕುಗಳು ಭಾರತಕ್ಕೆ ಆಮದಾಗುತ್ತದೆ. ಇದರಿಂದ ಭಾರತೀಯ ವಸ್ತುಗಳಿಗೆ ಬೇಡಿಕೆ ಕುಸಿದು, ಭಾರತದ ತಯಾರಿಕಾ ವಲಯಕ್ಕೆ ಧಕ್ಕೆಯಾಗುತ್ತದೆ. ಹಾಲಿನ ಉತ್ಪನ್ನಗಳೂ ಕಡಿಮೆ ಬೆಲೆಯಲ್ಲಿ ಆಮದಾಗುವುದರಿಂದ ಭಾರತದ ಹೈನುಗಾರಿಕೆಗೆ ಧಕ್ಕೆಯಾಗುವ ಸಾಧ್ಯತೆ ಇತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com