ಬ್ಯಾಂಕಿಂಗ್ ವ್ಯವಸ್ಥೆ ಸುರಕ್ಷಿತವಾಗಿದೆ, ಆತಂಕಪಡುವ ಅಗತ್ಯ ಇಲ್ಲ: ಆರ್ ಬಿಐ

ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತವಾಗಿದೆ ಮತ್ತು ಸ್ಥಿರವಾಗಿದೆ. ವದಂತಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಮಂಗಳವಾರ ಟ್ವೀಟ್ ಮಾಡಿದೆ.
ಪಿಎಂಸಿ ಬ್ಯಾಂಕ್
ಪಿಎಂಸಿ ಬ್ಯಾಂಕ್

ನವದೆಹಲಿ: ಭಾರತದ ಬ್ಯಾಂಕಿಂಗ್ ವ್ಯವಸ್ಥೆ ಸಂಪೂರ್ಣ ಸುರಕ್ಷಿತವಾಗಿದೆ ಮತ್ತು ಸ್ಥಿರವಾಗಿದೆ. ವದಂತಿಗಳನ್ನು ನಂಬಿ ಯಾರೂ ಆತಂಕಪಡುವ ಅಗತ್ಯ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿಐ) ಮಂಗಳವಾರ ಟ್ವೀಟ್ ಮಾಡಿದೆ.

ಸಹಕಾರಿ ಬ್ಯಾಂಕ್ ಸೇರಿದಂತೆ ಕೆಲವು ಬ್ಯಾಂಕ್ ಗಳ ಗ್ರಾಹಕರ ಖಾತೆಗಳ ಮೇಲೆ ನಿರ್ಬಂಧ ವಿಧಿಸಲಾಗಿದೆ ಎಂಬ ವದಂತಿಗಳ ಹಿನ್ನೆಲೆಯಲ್ಲಿ ಆರ್ ಬಿಐ ಈ ಸ್ಪಷ್ಟನೆ ನೀಡಿದೆ.

ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಗ್ರಾಹಕರ ಖಾತೆಗಳ ಮೇಲೆ ಕಳೆದ ಆರು ತಿಂಗಳಿಂದ ನಿರ್ಬಂಧ ವಿಧಿಸಲಾಗಿದೆ ಎಂದು ವದಂತಿ ಹಬ್ಬಿಸಲಾಗಿತ್ತು.

ಆರ್ ಬಿಐ ಇತ್ತೀಚಿಗೆ ಪಂಜಾಬ್ ಮತ್ತು ಮಹಾರಾಷ್ಟ್ರ ಸಹಕಾರಿ ಬ್ಯಾಂಕ್ ಲಿಮಿಟೆಡ್(ಪಿಎಂಸಿ) ಮೇಲೆ ಹಲವು ನಿರ್ಬಂಧಗಳನ್ನು ವಿಧಿಸಿದ್ದು, ಬ್ಯಾಂಕ್ ಗ್ರಾಹಕರು ಆರು ತಿಂಗಳ ಕಾಲ 10 ಸಾವಿರ ರೂಪಾಯಿಗಿಂತ ಹೆಚ್ಚು ಹಣ ಡ್ರಾ ಮಾಡಲು ಸಾಧ್ಯವಿಲ್ಲ.

ಪಿಎಂಸಿ ದೇಶದ ಆರು ರಾಜ್ಯಗಳಲ್ಲಿ 137 ಶಾಖೆಗಳನ್ನು ಹೊಂದಿದ್ದು, ಯಾವುದೇ ಶಾಖೆಯಲ್ಲೂ ಸಾಲ ಮಂಜೂರು ಅಥವಾ ಸಾಲ ನವೀಕರಣಕ್ಕೂ ಆರ್ ಬಿಐ ಅವಕಾಶ ನೀಡಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com